ರಾಜ್ಯ

ಕಾರ್ಮಿಕ ದಿನಾಚರಣೆಯಂದು ʻಪೌರ ಕಾರ್ಮಿಕರ ಸೇವೆʼ ಕಾಯಂ : ಸಿಎಂ ಘೋಷಣೆ

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ: ಸಿಎಂ

ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಸಿಎಂ ಕರೆ 

ಬೆಂಗಳೂರು : ಮೇ 1. ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದರು.

ವಾಹನ ಚಾಲಕರಿಗೂ ಕಾಯಂ

ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದರು.

ನಗದು ರಹಿತ ಆರೋಗ್ಯ ಕಾರ್ಡ್

ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಸಮುದಾಯಕ್ಕೆ ನಾರಾಯಣ್ ಅವರ ಕೊಡುಗೆ ದೊಡ್ಡದು:ಸಿಎಂ

ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ ಎಂದರು.

ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ ಎಂದರು.

ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

56 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

1 hour ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

1 hour ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

1 hour ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago