Mysore
24
overcast clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಕೈಗಾರಿಕಾ ವಲಯದ ಪ್ರಸ್ತಾವನೆಗಳಿಗೆ ಸಿಎಂ ಅನುಮೋದನೆ

ಬೆಂಗಳೂರು:  ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಸಭೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಚಲುವರಾಯಸ್ವಾಮಿ, ಪ್ರಿಯಾಂಕ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್‌  ಮ್ಯಾನುಫಾಕ್ಚರಿಂಗ್ ಕ್ಲಸ್ಟರ್‍ನಲ್ಲಿ ಸೆಮಿಕಂಡಕ್ಟರ್ ವಲಯದಲ್ಲಿ ರೂ. 3425 ಕೋಟಿ ವೆಚ್ಚದ ಪ್ರಥಮ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಲಾಭಾಂಶದಲ್ಲಿ ಪಾಲು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಈ ಕುರಿತು ಅನುಸರಿಸುತ್ತಿರುವ ನಿಯಮಗಳನ್ನು ಪರಿಶೀಲಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು.

ಕೆಐಎಡಿಬಿಯಿಂದ ಕೈಗಾರಿಕೆಗಳನ್ನು ಆರಂಭಿಸಲು ಜಮೀನು ಪಡೆಯುವ ಕಂಪೆನಿಗಳು ನಿಗದಿತ ಅವಧಿಯಲ್ಲಿ ಕೈಗಾರಿಕೆಯನ್ನು ಆರಂಭಿಸದಿದ್ದರೆ ದಂಡ ವಿಧಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಬೇಕು ಎಂದು ಆದೇಶಿಸಿದರು.

ಸರ್ಕಾರದ ನಿಯಮಾವಳಿಗೆ ಅನುಸಾರವಾಗಿ ಕೈಗಾರಿಕೆಗಳು ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ಮುಖ್ಯಮಂತ್ರಿ ಅವರು ಸೂಚಿಸಿದರು.

Tags: