ಬೆಂಗಳೂರು : ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಫಿ ಸಅದಿ ಅವರು ರಾಜ್ಯದ 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಆರಂಭಿಸಲು ಉದ್ದೇಶಿಸಿರುವ ಕುರಿತು ಪ್ರಸ್ತಾಪಿಸಿದ್ದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕಾರಿಸಿದ್ದಾರೆ. ‘ವಕ್ಫ್ ಮಂಡಳಿಯು ಮಹಿಳಾ ಕಾಲೇಜು ಆರಂಭಿಸುವ ಕುರಿತು ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ. ನನ್ನೊಂದಿಗೆಯಾಗಲೀ, ನಮ್ಮ ಸರ್ಕಾರದ ಯಾವುದೇ ಹಂತದಲ್ಲಿಯಾಗಲೀ ಈ ಬಗ್ಗೆ ಚರ್ಚೆಯಾಗಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ವಕ್ಫ್ ಮಂಡಳಿಯ ಅಧ್ಯಕ್ಷರು ಏನು ಹೇಳಿದ್ದಾರೆ ಎಂಬ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಅದು ಅವರ ವೈಯಕ್ತಿಕ ದೃಷ್ಟಿಕೋನ ಅಥವಾ ನಿಲುವು ಇರಬಹುದು. ಇದು ನಮ್ಮ ಸರ್ಕಾರದ ನಿಲುವು ಅಲ್ಲ. ವಕ್ಫ್ ಮಂಡಳಿಯ ಅಧ್ಯಕ್ಷರು ತಮ್ಮ ಆಲೋಚನೆಗಳ ಬಗ್ಗೆ ನನ್ನೊಂದಿಗೆ ಮಾತನಾಡಲಿ’ ಎಂದು ವಿವಾದದಿಂದ ಅಂತರ ಕಾಯ್ದುಕೊಂಡರು.