ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಈಗ ಸಿಎಂ ಕುರ್ಚಿ ಫೈಟ್ ಜೋರಾಗಿದೆ. ಸರ್ಕಾರಕ್ಕೆ ಎರಡುವರೆ ವರ್ಷ ತುಂಬಿಂದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಸಿಡಿದೆದ್ದಿದ್ದು, ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದ್ದಾರೆ. ಅಲ್ಲದೇ ಡಿಕೆಶಿ ಬಣದ ಶಾಸಕರು ದೆಹಲಿಗೆ ಹೋಗಿ ಬೆಂಗಳೂರಿಗೆ ವಾಪಸಾಗಿದ್ದಾರೆ.
ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಲೇಬೇಕೆಂದು ಬಹಿರಂಗವಾಗಿ ಕೆಲವರು ಹೇಳಿದ್ದಾರೆ. ಇನ್ನೊಂದೆಡೆ ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಪರೇಡ್ ನಡೆಸಿದ್ದು, ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕದನ ತೀವ್ರ ಸ್ವರೂಪ ಪಡೆದುಕೊಂಡಿದೆ. ಇನ್ನು ಈ ಎಲ್ಲಾ ಬೆಳವಣಿಗೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಹೇಳುವುದಕ್ಕೆ ನನ್ನ ಹತ್ತಿರ ಏನೂ ಇಲ್ಲ ಎಂದು ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: SIR | ಮೇಲ್ವಿಚಾರಣೆಗೆ ತಂಡ ರಚಸಿದ ಕಾಂಗ್ರೆಸ್
ಸದ್ಯ ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಬೆಂಗಳೂರಿನಲ್ಲಿಂದು ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹೇಳುವುದಕ್ಕೆ ನನ್ನ ಹತ್ತಿರ ಏನೂ ಇಲ್ಲ ರಾಜ್ಯದಲ್ಲಿನ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ. ಈಗ ನಡೆದ ವಿದ್ಯಮಾನದ ಬಗ್ಗೆ ಹೇಳಲು ನನ್ನ ಬಳಿ ಏನೂ ಇಲ್ಲ. ಯಾವುದೇ ವಿಚಾರದ ಬಗ್ಗೆಯೂ ಹೇಳುವುದಕ್ಕೆ ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅಸಹಾಯಕತೆ ಹೊರಹಾಕಿದ್ದಾರೆ.





