ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬಗ್ಗೆ ಹೈಕಮಾಂಡ್ ಹಲವು ಬಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರೂ ಕಾಂಗ್ರೆಸ್ ಪಕ್ಷದ ವಲಯದಲ್ಲಿ ಅದೇ ಮುಂದುವರೆದಿದೆ.
ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಶಾಸಕರ ಅಭಿಪ್ರಾಯ ಮುಖ್ಯ. ಅವರ ಅಭಿಪ್ರಾಯದ ಮೇರೆಗೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ ಎಂದರು.
ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಡಿಕೆ ಶಿವಕುಮಾರ್ ಸಿಎಂ ಆಗಲು ಶಾಸಕರ ಬೆಂಬಲಬೇಕು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕಮಾರ್, ಸಚಿವರೇ ಆಗಲಿ, ಶಾಸಕರೇ ಅಗಲಿ ಯಾವುದೇ ವಿಚಾರವನ್ನು ಸರ್ಕಾರ ಹಾಗೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು. ಹಾದಿಬೀದಿಯಲಿ ಈ ರೀತಿಯ ಹೇಳಿಕೆ ನೀಡುವುದು ತಪ್ಪು ಎಂದು ಹೇಳಿದರು.
ಮಂಗಳವಾರ ಮಾತನಾಡಿದ್ದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಶಾಸಕಾಂಗ ಪಕ್ಷದ ಅಭಿಪ್ರಾಯ ಸಂಗ್ರಹಿಸಿದ ನಂತರವೇ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ಎಲ್ಲ ಶಾಸಕರದ್ದು ಒಂದೇ ಅಭಿಪ್ರಾಯವಿರುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯಾಗುವವರು ಬಹಳಷ್ಟು ಜನ ಇದ್ದಾರೆ. ಹೈಕಮಾಂಡ್ ಎಲ್ಲರ ಅಭಿಪ್ರಾಯ ಕೇಳುತ್ತದೆ. ಅವರ ನಿರ್ಣಯಕ್ಕೆ ನಾವು ಬದ್ದರಾಗಿರುತ್ತೇವೆ ಎಂದು ಹೇಳಿದ್ದರು.
ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್ ರಕ್ಷಣಾ…
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…
ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್…
ಅಹಮದಬಾದ್ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.17) ತಲುಪಿರುವುದಾಗಿ ವರದಿಯಾಗಿದೆ.…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…