ಧಾರವಾಡ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಅರಾಜಕತೆ ಸೃಷ್ಟಿಯಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸೃಷ್ಟಿ ಅಂತಾ ಒತ್ತಾಯ ಎಬ್ಬಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಈ ಎಲ್ಲಾ ಹೇಳಿಕೆಗಳನ್ನು ತಮ್ಮ ಬಾಲಂಗೋಚಿಗಳಿಂದ ಹೇಳಿಸ್ತಾ ಇದ್ದಾರೆ. ಇತ್ತ ಸಿಎಂ ಅನ್ನೇ ಬದಲಾವಣೆ ಮಾಡಬೇಕು ಎಂದು ತಮ್ಮ ಹಿಂಬಾಲಕರಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಸುತ್ತಿದ್ದಾರೆ. ರಾಜ್ಯ ಸರ್ಕಾರ ದಿಕ್ಕು-ದಾರಿ ತಪ್ಪಿದೆ. ದಾರಿ ತಪ್ಪಿದ ಮಗನಂತೆ ಸರ್ಕಾರ ಆಗಿದೆ. ಒಬ್ಬೊಬ್ಬರಿಗೊಬ್ಬರು ತಮ್ಮ ಹಿಂಬಾಲಕರನ್ನು ಬಿಡುತ್ತಿದ್ದಾರೆ ಎಂದು ಕಿಡಿಕಾರಿದರು.
ತಮ್ಮದೇ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹೇಳಿಕೆಗಳನ್ನು ಕೊಡಿಸುತ್ತಾ ಇದ್ದಾರೆ. ಪಕ್ಷದ ಹೈಕಮಾಂಡ್ ಕ್ರಮ ಅಂತಾ ಹೇಳ್ತಾರೆ. ಏನೇ ಹೇಳಿದರೂ ಕ್ರಮ ಆಗುತ್ತಿಲ್ಲ. ಇಷ್ಟು ದಯನೀಯ ಸ್ಥಿತಿಗೆ ಕಾಂಗ್ರೆಸ್ ಸರ್ಕಾರ ಬಂದಿದೆ. ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಹೀಗಾಗಿದೆ. ಕಾಂಗ್ರೆಸ್ ಬಗ್ಗೆ ಜನ ಬೇಸತ್ತಿದ್ದಾರೆ. ಇದರ ಪರಿಣಾಮ ರಾಜ್ಯದ ಆಡಳಿತದ ಮೇಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಐದು ವರ್ಷ ಚೆನ್ನಾಗಿ ಆಡಳಿತ ನಡೆಸಿ ಅಂತಾನೇ ನಾವು ಹೇಳೋದು. ಅವರ ಆಂತರಿಕ ಕಾರಣದಿಂದ ಸರ್ಕಾರ ಬಿದ್ದರೆ ನಾವು ಜವಾಬ್ದಾರರಲ್ಲ. ಆಮೇಲೆ ಅದಕ್ಕೆ ಆಪರೇಷನ್ ಕಮಲ ಅಂತಾ ಅವರೇ ಹೇಳ್ತಾರೆ. ಆದರೆ ಆ ವಿಚಾರ ನಮ್ಮ ತಲೆಯಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…