ರಾಜ್ಯ

ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರ ಎಂದ ಮಾಜಿ ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು: ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರಕ್ಕೆ ಅದಕ್ಕೆ ನಾನು ತಲೆಹಾಕಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತಂತೆ ಸ್ವಾಮೀಜಿಗಳು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದು ಆ ಸ್ಥಾನವನ್ನು ಡಿಕೆಶಿಗೆ ನೀಡಲಿ ಎಂಬ ಆಗ್ರಹಗಳು ಆಗಾಗ್ಗೆ ಕೇಳಿ ಬರುತ್ತಲೇ ಇವರ. ಹೀಗಿರುವಾಗಲೇ ಒಕ್ಕಲಿಗ ಸ್ವಾಮೀಜಿಯೊಬ್ಬರು ಡಿ.ಕೆ.ಶಿವಕುಮಾರ್‌ ಅವರು ಸಿಎಂ ಸ್ಥಾನದಲ್ಲಿ ಕೂರಬೇಕು ಎಂದು ಆಗ್ರಹಿಸಿದ್ದಾರೆ.

ಸ್ವಾಮೀಜಿ ಹೇಳಿಕೆ ಬೆನ್ನಲ್ಲೇ ರಾಜ್ಯ ಸರ್ಕಾರದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು, ಡಿಕೆಶಿ ಅಭಿಮಾನಿಗಳೆಲ್ಲಾ ಈ ಆಗ್ರಹಕ್ಕೆ ಧ್ವನಿಗೂಡಿಸಿದ್ದಾರೆ.

ಈ ಬೆಳವಣಿಗೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು, ದೊಡ್ಡವರ ವಿಷಯ ನನಗೆ ಗೊತ್ತಿಲ್ಲ. ಕಳೆದ ಒಂದು ತಿಂಗಳಿಂದ ಎಚ್‌ಡಿಡಿ ವಿರುದ್ಧ ಏನೇನೋ ನಡೆಯಿತು. ಆದ್ರೂ ಯಾರೊಬ್ಬರೂ ಕೂಡ ನಮ್ಮ ವಿರುದ್ಧದ ಷಡ್ಯಂತ್ರದ ಬಗ್ಗೆ ಮಾತನಾಡಲಿಲ್ಲ. ಯಾರನ್ನಾದ್ರೂ ಸಿಎಂ ಮಾಡಲಿ ಆ ವಿಷಯ ನಮಗೆ ಬೇಕಿಲ್ಲ. ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರ. ಸಿಎಂ ಹುದ್ದೆ ನಮ್ಮ ಹತ್ತಿರ ಇಲ್ಲ. ಅದಕ್ಕೆ ನಾವು ಆ ಬಗ್ಗೆ ಹೆಚ್ಚಿಗೆ ಮಾತನಾಡಲು ಹೋಗಲ್ಲ ಎಂದರು.

ಇಬ್ಬರು ಮಕ್ಕಳು ಜೈಲಿನಲ್ಲಿರುವ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ದೇವರಿದ್ದಾನೆ ಎಲ್ಲವನ್ನೂ ಅವನೇ ನೋಡಿಕೊಳ್ತಾನೆ. ಅವನ ಮೇಲೆಯೇ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿ ತೆರಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಮೃಗಾಲಯದ ಹುಲಿ ʼಪೃಥ್ವಿʼ ಇನ್ನಿಲ್ಲ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…

43 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಏಪ್ರಿಲ್‌ 9  

1 hour ago

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

2 hours ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

2 hours ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

12 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

14 hours ago