ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಎಂದು ಹೇಳುವುದು ಸದ್ಯದಲ್ಲಿ ಅಪ್ರಸ್ತುತ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ.
ಶುಕ್ರವಾರ (ಆ.30) ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಬೇಕು ಎಂದು ಯಾರೂ ಹೇಳಿಲ್ಲ. ಸಿಎಂ ಬದಲಾವಣೆ ಬಗ್ಗೆ ನಾವು ಊಹೆ ಕೂಡಾ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಸಿಎಂ ಬದಲಾವಣೆ ಬಗೆಗಿನ ಚರ್ಚೆಗೆ ಯಾವುದೇ ಆಸ್ಪದವಿಲ್ಲ. ಇನ್ನು ಪರಮೇಶ್ವರ್ ಭೇಟಿ ಸಹಜವಾದದ್ದು ಇದರಲ್ಲಿ ಯಾವುದೇ ವಿಶೇಷತೆಯಿಲ್ಲ. ಪಕ್ಷ ಸಂಘಟನೆ, ಚುನಾವಣಾ ಚರ್ಚೆ ಬಗ್ಗೆ ಭೇಟಿ ವೇಳೆ ಚರ್ಚೆ ಮಾಡಲಾಗಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.