ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರ ಈ ಅಪ್ರಸ್ತುತ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದಲ್ಲಿ ಒಂದೆಡೆ ಜಾತಿಗಣತಿ ವಿಚಾರ ಭಾರೀ ಚರ್ಚೆಯಲ್ಲಿದ್ದು, ಈ ಮಧ್ಯೆ ಸಿಎಂ ಬದಲಾವಣೆ ಬಗ್ಗೆ ತೆರೆಮರೆಯಲ್ಲಿ ಚರ್ಚೆ ನಡೆಯುತ್ತಿದೆ.
ಮುಖ್ಯಮಂತ್ರಿ ಬದಲಾವಣೆ ಮಾಡಲು ಕಾಂಗ್ರೆಸ್ ಸಚಿವರು ಹಾಗೂ ಶಾಸಕರೇ ಒಳಗೊಳಗೆ ಆಟ ಶುರುಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಸಿಎಂ ಬದಲಾವಣೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಸ್ವಾಮೀಜಿಗಳು ಅವರ ಅಭಿಪ್ರಾಯ ತಿಳಿಸಿದ್ದಾರೆ. ಈ ವಿಚಾರದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಸದ್ಯಕ್ಕೆ ಸಿಎಂ ಬದಲಾವಣೆ ಬಗ್ಗೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯ ಅವರು 16 ಬಜೆಟ್ ಕೊಟ್ಟಿದ್ದು ಸತ್ಯವಲ್ಲವೇ ಎಂದು ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ರಾಜ್ಯದಲ್ಲಿ ಸಮನ್ವಯತೆ ಸಾಧಿಸಿದ್ದಾರೆ. ಅದನ್ನು ಹೊಗಳಿಕೆ ಅಂದುಕೊಂಡರೆ ಅಂದುಕೊಳ್ಳಲಿ ಎಂದರು.





