ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು, ಗೌರವ, ಸನ್ಮಾನಗಳಲ್ಲಿ ಮಿಂದೆದಿದ್ದಾರೆ. ಈ ನಡುವೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಕಾವೇರಿ ನಿವಾಸದಲ್ಲಿ ಭೇಟಿಯಾದ ಗಿಲ್ಲಿ ನಟನಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಗಂಧದ ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಗಿಲ್ಲಿ ನಟನ ಭುಜದ ಮೇಲೆ ಕೈ ಹಾಕಿ ಪೋತ್ಸಾಹಿಸಿದ್ದಾರೆ.
ಗಿಲ್ಲಿ ನಟ ತಮ್ಮ ಎಂದಿನ ಶೈಲಿಯಲ್ಲೇ ಸರಳವಾಗಿ ಶರ್ಟ್ ಧರಿಸಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಈ ವೇಳೆ ನಗರಾಭಿವೃದ್ದಿ ಖಾತೆ ಸಚಿವ ಭೈರತಿ ಸುರೇಶ್, ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್ ಕೂಡ ಉಪಸ್ಥಿತರಿದ್ದರು.
ಈ ಕುರಿತ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ, 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು, ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…