ರಾಜ್ಯ

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯಲಿರುವ ಉಪಾಹಾರ (ಬ್ರೇಕ್ ಫಾಸ್ಟ್) ಸಭೆ ಕುತೂಹಲ ಕೆರಳಿಸಿದೆ.

ಗುರುವಾರ ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆಶಿಗೆ ಉಪಹಾರ ಕೂಟ ಆತಿಥ್ಯ ವಹಿಸಲಿದ್ದಾರೆ. ಈ ಸಭೆ ಕೇವಲ ಸೌಜನ್ಯದ ಭೇಟಿಯೇ ಅಥವಾ ಮುಂದಿನ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆಯೋ ಎಂಬ ಲೆಕ್ಕಾಚಾರಗಳು ರಾಜಕೀಯ ಪಡಸಾಲೆಯಲ್ಲಿ ಶುರುವಾಗಿವೆ. ಇದು ಸುಗಮ ನಾಯಕತ್ವ ಬದಲಾವಣೆಯ ಹೈಕಮಾಂಡ್ ಸೂತ್ರ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಮಂಗಳವಾರ ದಿಲ್ಲಿಯಲ್ಲಿ ಹೈಕಮಾಂಡ್ ಜೊತೆ ಸುದೀರ್ಘ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಜೋರಾಗಿಯೇ ಚರ್ಚೆಯಾಗುತ್ತಿದೆ. ಇನ್ನು ಎರಡು ದಿನಗಳಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆಂದೋಲನ ಡೆಸ್ಕ್

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

13 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

14 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

14 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

15 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

15 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

18 hours ago