ರಾಜ್ಯ

ನಾಳೆ ದಿಲ್ಲಿಗೆ ಸಿಎಂ, ಡಿಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು ಗರಿಗೆದರಿವೆ.

ಸಚಿವ ಸಂಪುಟ ಪುನರ್ ರಚನೆ, ರಾಜ್ಯಸಭೆ, ವಿಧಾನಪರಿಷತ್ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ, ನಿಗಮ ಮಂಡಳಿಗಳ ನೇಮಕಾತಿ ಕುರಿತಂತೆ ಹೈಕಮಾಂಡ್ ನಾಯಕರ ಜೊತೆ ನಾಳೆಯ ಭೇಟಿಯ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸುವ ಸಾಧ್ಯತೆ ಇದೆ.

ಪೂರ್ವ ನಿಗದಿತ ಕಾರ್ಯಕ್ರಮಗಳ ಪ್ರಕಾರ ಸಿದ್ದರಾಮಯ್ಯ ಅವರು, ದೆಹಲಿಗೆ ಭೇಟಿ ನೀಡುವುದು ಬಹುತೇಕ ಖಚಿತವಾಗಿದೆ. ಡಿ.ಕೆ.ಶಿವಕುಮಾರ್ ಅವರ ಭೇಟಿ ಇನ್ನೂ ಖಚಿತವಾಗಿಲ್ಲ. ಆದರೆ  ಡಿಕೆಶಿ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಈಗಾಗಲೇ 20ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಈ ಮಧ್ಯೆ ಸಿಎಂ ಹಾಗೂ ಡಿಸಿಎಂ ದೆಹಲಿಗೆ ಭೇಟಿ ನೀಡುತ್ತಿರುವುದು ಭಾರೀ ಕುತೂಹಲಕ್ಕೆ ಮನೆಮಾಡಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago