Mysore
28
moderate rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

ಫಾಕ್ಸ್‌ಕಾನ್‌ ಸಂಸ್ಥೆ ಅಧ್ಯಕ್ಷರ ಜೊತೆ ಸಿಎಂ ಚರ್ಚೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತೈವಾನ್‌ ಮೂಲದ ಆಪಲ್‌ ಫೋನ್‌ ಕಂಪೆನಿ ಫಾಕ್ಸ್‌ಕಾನ್‌ ಸಂಸ್ಥೆಯ ಚೇರ್‌ಮನ್‌ ಹಾಗೂ ಅಧ್ಯಕ್ಷ ಯಂಗ್‌ ಲಿಯು ಅವರೊಂದಿಗಿನ ಚರ್ಚೆ ನಡೆಸಿದರು.

ಶುಕ್ರವಾರ ನಗರಕ್ಕೆ ಬಂದಿಳಿದ ಅವರನ್ನು ರಾಜ್ಯ ಸರರ್ಕಾರದ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಬಳಿಕ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್‌ಕಾನ್‌ ಕಂಪೆನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲ ರೀತಿಯ ಸಹಕಾರ ಹಾಗೂ ನೆರವು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದು ಸಿಎಂ ಮನವರಿಕೆ ಮಾಡಿಕೊಟ್ಟರು.

ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ತಮ್ಮ ಯೋಜನೆಯಿಂದ ಇಲ್ಲಿ ಉದ್ಯೋಗದ ಉತ್ತಮ ಅವಕಾಶಗಳು ಸೃಷ್ಟಿಯಾಗಲಿದೆ. ಇದು ಸ್ಥಳೀಯ ಆರ್ಥಿಕತೆಗೆ ಚೇತರಿಕೆ ನೀಡಲಿದೆ ಮಾತ್ರವಲ್ಲದೆ, ಸ್ಥಳೀಯ ಕೆಲಸಗಾರರನ್ನು ಇನ್ನಷ್ಟು ಸಬಲಗೊಳಿಸಿ, ಈ ವಲಯದ ಸಮಗ್ರ ಅಭಿವೃದ್ಧಿಗೆ ಕಾರಣವಾಗಲಿದೆ ಎಂದು ಹೇಳಲು ಸಂತಸವೆನಿಸುತ್ತದೆ. ಈ ನಿಟ್ಟಿನಲ್ಲಿ ಫಾಕ್ಸ್‌ಕಾನ್‌ಗೆ ಅಗತ್ಯವಾದ ಎಲ್ಲಾ ನೆರವು ಒದಗಿಸುವುದನ್ನು ನಾನು ಖಾತ್ರಿಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ , ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: