ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತೈವಾನ್ ಮೂಲದ ಆಪಲ್ ಫೋನ್ ಕಂಪೆನಿ ಫಾಕ್ಸ್‌ಕಾನ್ ಸಂಸ್ಥೆಯ ಚೇರ್‌ಮನ್ ಹಾಗೂ ಅಧ್ಯಕ್ಷ ಯಂಗ್ ಲಿಯು ಅವರೊಂದಿಗಿನ ಚರ್ಚೆ ನಡೆಸಿದರು.
ಶುಕ್ರವಾರ ನಗರಕ್ಕೆ ಬಂದಿಳಿದ ಅವರನ್ನು ರಾಜ್ಯ ಸರರ್ಕಾರದ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಬಳಿಕ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್‌ಕಾನ್ ಕಂಪೆನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲ ರೀತಿಯ ಸಹಕಾರ ಹಾಗೂ ನೆರವು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದು ಸಿಎಂ ಮನವರಿಕೆ ಮಾಡಿಕೊಟ್ಟರು.
ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ತಮ್ಮ ಯೋಜನೆಯಿಂದ ಇಲ್ಲಿ ಉದ್ಯೋಗದ ಉತ್ತಮ ಅವಕಾಶಗಳು ಸೃಷ್ಟಿಯಾಗಲಿದೆ. ಇದು ಸ್ಥಳೀಯ ಆರ್ಥಿಕತೆಗೆ ಚೇತರಿಕೆ ನೀಡಲಿದೆ ಮಾತ್ರವಲ್ಲದೆ, ಸ್ಥಳೀಯ ಕೆಲಸಗಾರರನ್ನು ಇನ್ನಷ್ಟು ಸಬಲಗೊಳಿಸಿ, ಈ ವಲಯದ ಸಮಗ್ರ ಅಭಿವೃದ್ಧಿಗೆ ಕಾರಣವಾಗಲಿದೆ ಎಂದು ಹೇಳಲು ಸಂತಸವೆನಿಸುತ್ತದೆ. ಈ ನಿಟ್ಟಿನಲ್ಲಿ ಫಾಕ್ಸ್‌ಕಾನ್‌ಗೆ ಅಗತ್ಯವಾದ ಎಲ್ಲಾ ನೆರವು ಒದಗಿಸುವುದನ್ನು ನಾನು ಖಾತ್ರಿಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ , ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…
ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…
ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…