ರಾಜ್ಯ

ನಗಾರಿ ಬಾರಿಸುವ ಮೂಲಕ ಹಂಪಿ ಉತ್ಸವಕ್ಕೆ ಸಿಎಂ ಚಾಲನೆ!

ಹಂಪಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿದರು.

ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ವೈಭವವನ್ನು ಇತಿಹಾಸಕಾರ ಅಬ್ದುಲ್ ರಜಾಕ್ ಚಿತ್ರಿಸಿರುವುದನ್ನು ಉಲ್ಲೇಖಿಸಿ, ಇತಿಹಾಸದ ಅರಿವು ಪ್ರತಿಯೊಬ್ಬರಿಗೂ ಅಗತ್ಯ . ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲಾರರು ಎಂದರು.‌

ನಮ್ಮ ಸರ್ಕಾರಕ್ಕೆ ವಿಜಯನಗರ ಕಾಲದ ವೈಭವ ಮತ್ತು ಬಸವಾದಿ ಶರಣರ ಆಶಯಗಳು ಮತ್ತು ಇವರು ಹಾಕಿಕೊಟ್ಟ ಮಾರ್ಗವೇ ಮಾದರಿ. ಆದ್ದರಿಂದ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು.

ಬಸವಾದಿ ಶರಣರ, ಅಂಬೇಡ್ಕರ್ ಅವರ ಸಂವಿಧಾನದ ಆಶಯ ಎರಡೂ ಒಂದೇ ಆಗಿದೆ. ಸಹಿಷ್ಣತೆ, ಸಹಬಾಳ್ವೆ, ಸಂಪತ್ತಿನ ಸಮಾನ ಹಂಚಿಕೆ, ಅವಕಾಶಗಳ ಸಮಾನ ಹಂಚಿಕೆ ಬಸವಾದಿ ಶರಣರು ಮತ್ತು ಅಂಬೇಡ್ಕರ್ ಅವರ ಆಶಯವಾಗಿದೆ. ಈಗ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕೆ ಅವಕಾಶ ಕೊಡಬಾರದು ಎಂದು ಕರೆ ನೀಡಿದರು.

ಪ್ರತಿಯೊಬ್ಬರೂ ತಮ್ಮ ಧರ್ಮವನ್ನು ಪ್ರೀತಿಸಬೇಕು. ಪರ ಧರ್ಮಗಳನ್ನು ಗೌರವಿಸಬೇಕು. ಧರ್ಮ ಧರ್ಮದ ನಡುವೆ, ಜಾತಿ-ಜಾತಿಗಳ ನಡುವೆ ದ್ವೇಷ, ವೈಷಮ್ಯ ಹರಡುವವರನ್ನು ತಿರಸ್ಕರಿಸದೇ ಹೋದರೆ ನಾಡಿನ, ದೇಶದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಬಸವಣ್ಣನವರ ಆಶಯದ ಸಹಬಾಳ್ವೆ, ಸಹಿಷ್ಣತೆ ನಮಗೆ, ನಿಮಗೆ ಮಾದರಿಯಾಗಲಿ ಎಂದು ನೆರೆದಿದ್ದ ಜನಸ್ತೋಮಕ್ಕೆ ಮುಖ್ಯಮಂತ್ರಿಗಳು ಕರೆ ನೀಡಿದರು.

ನಮ್ಮ ಗ್ಯಾರಂಟಿಗಳನ್ನು ಟೀಕಿಸುತ್ತಿದ್ದರು, ಈಗ ನಮ್ಮದೇ ಗ್ಯಾರಂಟಿಗಳನ್ನು ಕಾಪಿ ಮಾಡಿ ಅದಕ್ಕೆ, “ಮೋದಿ ಗ್ಯಾರಂಟಿ” ಎಂದು ಹೆಸರಿಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳು ವ್ಯಂಗ್ಯವಾಡಿದರು.

ರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರದಿಂದ ನಮ್ಮ ಪಾಲಿನ ನಯಾಪೈಸೆ ಇದುವರೆಗೂ ಬಂದಿಲ್ಲ. ಆದರೆ ರಾಜ್ಯ ಸರ್ಕಾರ 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಪರಿಹಾರದ ಹಣವನ್ನು ಜಮಾ ಮಾಡಿದೆ. ನಮ್ಮ ಗ್ಯಾರಂಟಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳಿಂದ ಪ್ರತೀ ಕುಟುಂಬಕ್ಕೆ ಹಣ ಉಳಿತಾಯ ಆಗಿ ಬರಗಾಲದ ಸಂಕಷ್ಟದಿಂದ ಬಡ ಮತ್ತು ಮಧ್ಯಮ ವರ್ಗದವರನ್ನು ಪಾರು ಮಾಡಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ನಮ್ಮ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವ ಮತ್ತು ಮಧ್ಯಮ ವರ್ಗದವರಿಗೆ ತಲುಪುತ್ತಿದೆ. ವಿಜಯನಗರ ಸಾಮ್ರಾಜ್ಯದ ಕಾಲದ ವೈಭವ ಪುನಃ ರಾಜ್ಯದಲ್ಲಿ ಮರುಕಳಿಸಬೇಕು ಎನ್ನುವುದು ನಮ್ಮ ಸರ್ಕಾರದ ಆಶಯ ಎಂದರು.

ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್, ಕ್ರೀಡಾ ಮತ್ತು ಯುವಜನ ಸಭಲೀಕರಣ ಸಚಿವ ನಾಗೇಂದ್ರ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ, ಶಾಸಕರುಗಳಾದ ಈ.ತುಕಾರಾಮ್, ಕಂಪ್ಲಿ ಗಣೇಶ್, ಲತಾ ಎಂಪಿ ಪ್ರಕಾಶ್, ರಾಘವೇಂದ್ರ ಹಿಟ್ನಾಳ್ , ನಾರಾ ಭರತ್ ರೆಡ್ಡಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

andolanait

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

3 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

9 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

9 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

10 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

11 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

17 hours ago