ರಾಜ್ಯ

ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ ಸಿಎಂ : ಏನದು?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ(ಆ.16) ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗೆ ಸಿಎಂ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.

ಸಭೆಯ ಮುಖ್ಯಾಂಶಗಳು ಹೀಗಿವೆ….
• ಕಳೆದ ವರ್ಷಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38793 ಕೋಟಿ ಬಿಡುಗಡೆಯಾಗಿದ್ದು, ರೂ. 38,717ಕೋಟಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ. ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ರೂ. 880 ಕೋಟಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

• ಎಸ್‌ಸಿಎಸ್ಟಿ/ ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ.

ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6 ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ.

• ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ 2019-20ರ ಅವಧಿಯಲ್ಲಿ ನಿಗದಿತ ಶೇಕಡಾಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.

• ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ ಎಂದರು.

• ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

• ಈ ವರ್ಷ ರೂ. 42017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು ಎಂದರು.

• ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

• ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ ಎಂದರು.

* ದೇವದಾಸಿಯರೂ ಸೇರಿದಂತೆ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ. ಕರ್ನಾಟಕ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ 2.97 ಕೋಟಿಯಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ. ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು ಎಂದು ವಿಷಾಧಿಸಿದರು.

• ಕಳೆದ ಸಾಲಿನಲ್ಲಿ ಎಸ್‌ಸಿಸಿಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು.

• ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

5 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

7 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

8 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

8 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

8 hours ago