ಬೆಂಗಳೂರು: ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ನಾಡಿನ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, ಮತ್ತೊಂದು ಕಡೆ ಇದೇ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇದ್ದಾಗ ಪರೀಕ್ಷೆಗೆ ಹೋಗುವ ವಿದ್ಯಾರ್ಥಿ, ವಿದ್ಯಾರ್ಥಿನಿಯರ, ತಾಯಂದಿರ ತಾಳಿ, ಕಾಲುಂಗುರ ತೆಗೆದಿಟ್ಟು ಹೋಗಲು ತಿಳಿಸುತ್ತದೆ. ರಾಜ್ಯ ಸರಕಾರದ ಈ ನಡವಳಿಕೆ ನಿಜವಾಗಿಯೂ ತಲೆತಗ್ಗಿಸುವಂಥದ್ದು. ಬಿಜೆಪಿ, ಇದನ್ನು ಬಲವಾಗಿ ಖಂಡಿಸುತ್ತದೆ ಎಂದರು.
ಮುಖ್ಯಮಂತ್ರಿಯವರಿಂದ ಇಂತಹ ಹೇಳಿಕೆಯನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಕನಿಷ್ಟಪಕ್ಷ ಶಾಲಾ-ಕಾಲೇಜುಗಳಿಗೆ ಹೋಗುವ ಮಕ್ಕಳನ್ನು ರಾಜಕೀಯದಿಂದ ದೂರ ಇಡುವ ಕೆಲಸ ಮಾಡಬೇಕಿತ್ತು ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ಸಿಗರು, ತುಷ್ಟೀಕರಣ ನೀತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದ ಅವರು, ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯದ ನಂತರ 50ರಿಂದ 60 ವರ್ಷಗಳ ಕಾಲ ದೇಶ, ರಾಜ್ಯವನ್ನು ಆಳಿದೆ. ಆದರೂ, ಅಲ್ಪಸಂಖ್ಯಾತರಲ್ಲಿ ಶೇ.50ರಷ್ಟು ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದರೆ ಅದಕ್ಕೆ ಯಾರು ಹೊಣೆಗಾರರು? ಮುಖ್ಯಮಂತ್ರಿಗಳು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…
ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…
ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ…