ಬೆಂಗಳೂರು: ರಾಜಕೀಯವಾಗಿ ಅತಂತ್ರವಾಗಿರುವ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಪುತ್ರ ಫೈಜ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಫೈಜ್ ಇಬ್ರಾಹಿಂ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿ ಹಲವರು ಇದ್ದರು.
ತಂದೆಯ ಹಾಗೆ ಫೈಜ್ ಸಹ ಜೆಡಿಎಸ್ ಪಕ್ಷದಲ್ಲಿದ್ದರು ಹಾಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹುಮನಾಬಾದ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ತರಲು ಸಚಿವ ಜಮೀರ್ ಅಹ್ಮದ್ ಖಾನ್ ನಿರ್ಣಾಯಕ ಪಾತ್ರ ವಹಿಸಿದರೆಂದು ಹೇಳಲಾಗಿದೆ.
ಇಬ್ರಾಹಿಂ ಮತ್ತು ಸಿದ್ದರಾಮಯ್ಯ ದಶಕಗಳ ಸ್ನೇಹ ಜೊತೆಗೆ ಸಲುಗೆಯಿಂದ ಮಾತನಾಡುವ ಗೆಳತನ ಕೂಡ ಅವರಲ್ಲಿತ್ತು. ಫೈಜ್‌ರನ್ನು ಸಿದ್ದರಾಮಯ್ಯ ಬಾಲ್ಯದಿಂದ ಬಲ್ಲರು.





