ರಾಜ್ಯ

ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ

ತುಮಕೂರು(ಪಾವಗಡ) : ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲ್ಲೂಕು  ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ತುಮಕೂರಿನ ಪಾವಗಡದಲ್ಲಿ ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಯ ಉದ್ಘಾಟನೆ ಮತ್ತು 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣ ದ ಘೋಷಣೆ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿ ನಂತರ ಸರ್ಕಾರಿ ಇಲಾಖೆ ಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಫ್ಲೋರೈಡ್ ಯುಕ್ತ ನೀರಿನಿಂದ ಮುಕ್ತಿ
2018ರ ಜನರಿಯಲ್ಲಿ ಪಾವಗಡ ಮತ್ತಿತರ ಐದು ತಾಲ್ಲೂಕುಗಳಿಗೆ ಅನುಕೂಲ ಕಲ್ಪಿಸುವ ಕುಡಿಯುವ ನೀರಿನ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇಲ್ಲಿನ ಜನರು ಫ್ಲೋರೈಡ್ ಯುಕ್ತ ನೀರನ್ನು ಕುಡಿಯುವ ಅನಿವಾರ್ಯತೆ ಇತ್ತು. ಇದರಿಂದ ಜನರಿಗೆ ಆರೋಗ್ಯದ ತೊಂದರೆಗಳಿಗೆ ಒಳಗಾಗುತ್ತಿದ್ದರು. ಈ ಸಮಸ್ಯೆಯಿಂದ ಜನರನ್ನು ಹೊರತೆಗೆಯಲು ,ಸುಮಾರು 200 ಕಿ.ಮೀ. ನಷ್ಟು ದೂರವಿರುವ ತುಂಗಭದ್ರಾ ಜಲಾಶಯದ ಹಿನ್ನೀರನ್ನು ಪಾವಗಡಕ್ಕೆ ತರುವ ಯೋಜನೆಗೆ ಚಾಲನೆ ನೀಡಲಾಗಿದೆ. ಹಿಂದಿನ ಅವಧಿಯಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದಿದ್ದರೇ, ಈ ಯೋಜನೆಯನ್ನು ಮೂರು ವರ್ಷಗಳ ಮುಂಚೆಯೇ ಪೂರ್ಣಗೊಳಿಸಬಹುದಾಗಿತ್ತು ಎಂದರು.

2050ರವರೆಗೆ ಈ ಯೋಜನೆಯ ಲಾಭವನ್ನು ಜನರು ಪಡೆಯಬಹುದಾಗಿದೆ.  ಈ ಯೋಜನೆಯಿಂದ ಸುಮಾರು 17.50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿದಂತಾಗುತ್ತದೆ. ಶುದ್ಧ ಕುಡಿಯುವ ನೀರಿನ ಯೋಜನೆಯಿಂದ ಜನರು ಅಂಗವೈಕಲ್ಯತೆಯಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಪಾರಾಗಿದ್ದಾರೆ ಎಂದರು.

ಪಾವಗಡ ತಾಲ್ಲೂಕಿನ 270 ಹಳ್ಳಿಗಳಿಗೆ ಮತ್ತು ಪಾವಗಡ ಪಟ್ಟಣಕ್ಕೆ ಈ ಯೋಜನೆಯಿಂದ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ಈ ಯೋಜನೆಗೆ ಹಗಲಿರುಳು ದುಡಿದ ಸಚಿವರು ಹಾಗೂ ಶಾಸಕರ ಪ್ರಯತ್ನಗಳು ಇಂದು ಫಲಿಸಿದೆ. ಈ ಯೋಜನೆಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸುವ ಸುಯೋಗ ನನಗೆ ದೊರೆತಿರುವುದು ಸಂತೋಷ ತಂದಿದೆ ಎಂದರು.

ಏಷ್ಯಾದಲ್ಲಿ ನಂ.1 ವಿದ್ಯುತ್ ಉತ್ಪಾದನೆ ಘಟಕ
ಪಾವಗಡದಲ್ಲಿ ವಿದ್ಯುತ್ ಉತ್ಪಾದನೆ ಪ್ಲಾಂಟ್ ಏಷ್ಯಾದಲ್ಲೇ ನಂ.1 ಆಗಿದೆ.ಈಗಾಗಲೇ 2050 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು , ಮುಂದಿನ ಎರಡು ತಿಂಗಳಲ್ಲಿ 2400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, ಇದರಿಂದ ಪಾವಗಡದ ಚಿತ್ರಣವೇ ಬದಲಾಗಲಿದೆ ಎಂದರು.ನಂಜುಂಡಪ್ಪ ವರದಿಯಲ್ಲಿ ಪಾವಗಡವನ್ನು ಅತ್ಯಂತ ಹಿಂದುಳಿದ ತಾಲ್ಲೂಕು ಎಂದು ಗುರುತಿಸಲ್ಪಟ್ಟಿತ್ತು.ಈಗ ತುಮಕೂರಿನ ತಾಲ್ಲೂಕಿನ ಪಟ್ಟಿಯಲ್ಲಿ ಪಾವಗಡ ಮೊದಲನೇ ಸ್ಥಾನದಲ್ಲಿದ್ದು, ಈ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ.ಈ ಭಾಗಕ್ಕೆ ಸೇರಿದ ಕಾಂಗ್ರೆಸ್ ನ ಸಚಿವರು ಹಾಗೂ ಶಾಸಕರಿಗೆ ಜನರು ಸದಾ ಆಶೀರ್ವಾದ ಮಾಡಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರಿನ ಕುವೆಂಪು ಮನೆ ಇನ್ಮುಂದೆ ಸ್ಮಾರಕ : ಸರ್ಕಾರದ ಘೋಷಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…

4 mins ago

ಬೆಳೆ ವಿಮೆ ಪರಿಹಾರ ಸುಧಾರಣೆ : ಅದೇ ಹಂಗಾಮಿನಲ್ಲೇ ವಿತರಣೆಗೆ ಕ್ರಮ ; ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ…

33 mins ago

ವಾಜಮಂಗಲ ಬಳಿ ಘರ್ಜಿಸಿದ ಜೆಸಿಬಿ : ಅನಧಿಕೃತ ಕಟ್ಟಡ ನೆಲಸಮ ಮಾಡಿದ ಎಂಡಿಎ

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…

2 hours ago

ಮುಡಾ ಪ್ರಕರಣದಲ್ಲಿ ಸಿಎಂʼಗೆ ಬಿಗ್‌ ರಿಲೀಫ್‌ : ಬಿ ರಿಪೋರ್ಟ್‌ ಎತ್ತಿ ಹಿಡಿದ ಕೋರ್ಟ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…

2 hours ago

ಒಳಚರಂಡಿ ನೀರು ಕಾಲುವೆ ಸೇರಿದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ : ಶಾಸಕ ಜಿಟಿಡಿ ಸೂಚನೆ

ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ ಮೈಸೂರು : ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ…

2 hours ago

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

2 hours ago