ಬೆಂಗಳೂರು : ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು.
ಸಭೆಯ ಇತರ ಮುಖ್ಯಾಂಶಗಳು ಹೀಗಿವೆ..
• ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
• ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ.
• ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ.
• ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು.
• ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು.
• ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ.
• ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…