ಬೆಂಗಳೂರು : ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು.
ಸಭೆಯ ಇತರ ಮುಖ್ಯಾಂಶಗಳು ಹೀಗಿವೆ..
• ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
• ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ.
• ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ.
• ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು.
• ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು.
• ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ.
• ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಕೊಡಗು: ಜಿಲ್ಲೆಯ ಕುಶಾಲನಗರ ಸಮೀಪದ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದೆ.…
ಯಳಂದೂರು: ಬಿಳಿಗಿರಿರಂಗನ ಬೆಟ್ಟಕ್ಕೆ ಹೋಗುತ್ತಿದ್ದ ಸವಾರರು ಗುರುವಾರ ಸುಮಾರು ಒಂದು ಗಂಟೆ ರಸ್ತೆಯಲ್ಲೇ ಕಾಯಬೇಕಾಯಿತು. ಕಾರಣ, ಗೇಮ್ ರೋಡ್‌ನ ಮಧ್ಯದಲ್ಲೇ…
ಬೆಂಗಳೂರು: ರಾಜ್ಯದ ನಿಗಮ–ಮಂಡಳಿ ಅಧ್ಯಕ್ಷರು ಮತ್ತು ಸರ್ಕಾರದ ಪ್ರಮುಖ ಹುದ್ದೆಗಳ ಪಟ್ಟಿ ಪ್ರಕಟವಾಗಿದೆ. ಒಟ್ಟು 18 ಮಂದಿಗೆ ಜವಾಬ್ದಾರಿ ಹಂಚಿಕೆ…
ಮೈಸೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗಿಬರುವ - ಬಸ್ಸುಗಳಲ್ಲಿ ಪ್ರಯಾಣಿಕರಿಗೆ ನಮ್ಮ ಹೆಮ್ಮೆಯ ನಂದಿನಿಯ ಬಾದಾಮಿ ಹಾಲು, ಮಜ್ಜಿಗೆ, ಲಸ್ಸಿ…
ತಮ್ಮ ಪ್ರಮುಖ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಮುಷ್ಕರ ಮುಂದುವರಿಸಿರುವುದು…
ರೈತರು ತಮ್ಮ ಹೊಲಗದ್ದೆ ಹಾಗೂ ತೋಟಗಳಲ್ಲಿ ಕೃಷಿ ಕಾರ್ಯಕ್ಕೆ ತೆರಳುವಾಗ ಇಲ್ಲವೇ ಮನೆಗೆ ಮರಳುವಾಗ ಕಾಡಾನೆಗಳ ದಾಳಿಗೆ ತುತ್ತಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.…