ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು ವಿಷಾದನೀಯ ಸಂಗತಿ. ವೈಚಾರಿಕತೆ ಹಾಗೂ ವೈಜ್ಞಾನಿಕ ವಿದ್ಯೆ ಪ್ರತಿಯೊಬ್ಬರಿಗೂ ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066ನೇಯ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಳವಳ್ಳಿಯಲ್ಲಿ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066 ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ರಾಷ್ಟ್ರ ಪತಿಗಳು ಉದ್ಘಾಟನೆ ನೆರವೇರಿಸಿದ್ದಾರೆ. ಈ ಜಯಂತಿ ಮಹೋತ್ಸವ ಎಲ್ಲಾ ತಾಲ್ಲೂಕುಗಳಲ್ಲಿ ನಡೆಯುತ್ತಿದ್ದು ಬಹಳ ದಿರ್ಘಕಾಲದಿಂದಲೂ ನಡೆಯುತ್ತಾ ಬಂದಿದೆ. ಮುಂದಿನ ವರ್ಷ ಗುಂಡ್ಲುಪೇಟೆಯಲ್ಲಿ ನಡೆಯುವ ಬಗ್ಗೆ ತಿರ್ಮಾನ ಮಾಡಲಾಗಿದ್ದು ಎಲ್ಲಾ ಕಾರ್ಯಕ್ರಮಗಳು ಅದ್ಧೂರಿಯಾಗಿ ಈ ಕಾರ್ಯಕ್ರಮ ಆಚರಣೆ ಮಾಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು.
ನಮ್ಮ ಸಮಾಜದಲ್ಲಿ ಅನೇಕ ಜಾತಿಗಳು ಇರುವುದರಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ವ್ಯವಸ್ಥೆಯಿಂದ ಶಾಂತಿ ಮೂಡಿಬರುವುದಿಲ್ಲ. ಈ ವಿಷಯವನ್ನು ಈ ಹಿಂದೆ ದಾರ್ಶನಿಕರು, ಬಸವವಾದಿ ಶರಣರು ಹೇಳುತ್ತಾ ಬಂದಿದ್ದಾರೆ. ಕುವೆಂಪು ಅವರು ಮನುಷ್ಯ ಸಮಾಜ ನಿರ್ಮಾಣ ಆಗಬೇಕು ಎಂದು ಹೇಳಿದ್ದರು. ಸಮಾಜದಲ್ಲಿ ಜನರ ನಡುವೆ ಪ್ರೀತಿ ಇರಬೇಕು. ಇದೇ ನಮ್ಮ ಸಂಸ್ಕೃತಿ ಆಗಿದೆ. ಅನೇಕ ಸಾಧು ಮುನಿಗಳು, ಖುಷಿಗಳು ಮನುಷ್ಯ ಮನುಷ್ಯ ನಡುವೆ ಪ್ರೀತಿಯಿಂದ ಇರಬೇಕು ಎಂದು ಹೇಳಿದ್ದಾರೆ. ದ್ವೇಷ ಮಾಡಬಾರದು. ಜಾತಿ ಹೋಗಬೇಕಾದರೆ ಸಾಮಾಜಿಕ ಹಾಗೂ ಆರ್ಥಿಕ ಶಕ್ತಿ ಬರಬೇಕು ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಚಲನೆ ಸಿಗುವುದು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ಬಂದರೆ ಮಾತ್ರ ಸಿಗುತ್ತದೆ ಎಂದು ಅವರು ಮುಖ್ಯಮಂತ್ರಿಗಳು ತಿಳಿಸಿದರು.
ಇದನ್ನು ಓದಿ: ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್ ನೋಟಿಸ್ ಜಾರಿ
ಜಯಂತಿಗಳನ್ನು ಆಚರಣೆ ಮಾಡುತ್ತಿರುವುದು ಎಲ್ಲಾ ಒಗ್ಗೂಡಿ ಪ್ರೀತಿಯಿಂದ ಇರಬೇಕು ಎಂಬ ಉದ್ದೇಶದಿಂದ ಮಾತ್ರ ಎಂದು ಅವರು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಮಾತನಾಡಿ, ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066 ನೇಮ ಜಯಂತಿ ಮಹೋತ್ಸವ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜಯಂತೋತ್ಸವ ನಡೆದಿದ್ದು ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಮಾತನಾಡಿ, ಸುತ್ತೂರು ಶ್ರೀ ಮಠ ಪ್ರತಿವರ್ಷ ಜಯಂತೋತ್ಸವ ಆಚರಣೆ ಮಾಡುತ್ತಿದೆ. ಶಿವಯೋಗಿಗಳು ನಾಡಿನ ಜನರನ್ನ ಒಗ್ಗೂಡಿಸಿ ಸೋದರತ್ವ ಬೆಳೆಸಿದವರು. ಮನುಷ್ಯ ಹುಟ್ಟಿದ ಮೇಲೆ ಧರ್ಮ, ಧರ್ಮವನ್ನು ಸರಿಯಾಗಿ ಅರ್ಥೈಹಿಸಿ ನಾವೆಲ್ಲರೂ ಒಂದೇ ರೀತಿ ಅನ್ನೋ ಮನೋಭಾವ ಮೂಡಿಸಿರುವುದೇ ಗುರಿ.ಶ್ರೀ ಮಠಕ್ಕೆ ಎಲ್ಲಾ ಪಕ್ಷ, ಎಲ್ಲಾ ಧರ್ಮೀಯರು ಬರುತ್ತಾರೆ. ಪ್ರಜಾಪ್ರಭುತ್ವ ನಡವಳಿಕೆ ಬಗ್ಗೆ ನಂಬಿಕೆ ಇದೆ. ಬಸವಣ್ಣ ಯಾರ ವಿರುದ್ಧ ಸೇಡುತೀರಿಸಿಕೊಳ್ಳಲ್ಲಿಲ್ಲ. ಡಾ ಬಿ.ಆರ್.ಅಂಬೇಡ್ಕರ್ ಬಾಲ್ಯದಲ್ಲೇ ನೋವು ಅನುಭವಿಸಿದರು. ಆದರೂ ಯಾರ ಬಗ್ಗೆಯೂ ದ್ವೇಷ ಮಾಡಿಲ್ಲ. ಶ್ರೀಗಳು ಮನುಷ್ಯರ ನಡುವೆ ಸೋದರತ್ವ ಬಿತ್ತುವ ಕೆಲಸ ಮಾಡಿದ್ದಾರೆ. ಜಯಂತೋತ್ಸವದಲ್ಲಿ ಎಲ್ಲಾ ಧರ್ಮೀಯರು ಸೇರಿದ್ದಾರೆ ಇದೇ ಒಗ್ಗೂಡೂವಿಕೆಯಾಗಿದ್ದು ಸುತ್ತೂರು ಶ್ರೀ ಮಠ ಮಹತ್ತರ ಕಾರ್ಯ ಮಾಡುತ್ತಿದೆ ಎಂದು ಅವರು ತಿಳಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…