ರಾಜ್ಯ

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ನುಡಿದರು.

ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ ಯೋಜನೆಗೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಾಂಕೇತಿಕ ನಿವೇಶನ ಹಂಚಿಕೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

ಇಲ್ಲಿಯವರೆಗೂ ಕೇವಲ ವಸತಿ ನಿರ್ಮಾಣ ಮಾಡುತ್ತಿದ್ದ ವಸತಿ ಇಲಾಖೆ ಮತ್ತು KHB ಈಗ 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವುದು ಪ್ರಗತಿಯ ದೂರದೃಷ್ಟಿಯಾಗಿದೆ . ಇದಕ್ಕಾಗಿ ಶಿವಲಿಂಗೇಗೌಡರು ಮತ್ತು ಜಮೀರ್ ಅಹಮದ್ ಅವರು ಅಭಿನಂದನಾರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗುಜರಾತ್ ನಲ್ಲಿರುವ ಕ್ರೀಡಾಂಗಣ 90 ಸಾವಿರ ಆಸನ ವ್ಯವಸ್ಥೆ ಇರುವಂಥಾದ್ದು. ನಮ್ಮ ರಾಜ್ಯದ್ದು ಎರಡನೇ ದೊಡ್ಡ ಕ್ರೀಡಾಂಗಣವಾಗಿದೆ. ಇದರಿಂದ ಪ್ರವಾಸೋದ್ಯಮದ ಪ್ರಗತಿಯ ಜೊತೆಗೆ ಸುತ್ತ ಮುತ್ತಲ ಊರುಗಳ ಆರ್ಥಿಕತೆಯೂ ಹೆಚ್ಚುತ್ತದೆ. ಉದ್ಯೋಗವೂ ಹೆಚ್ವುತ್ತದೆ. ಸರ್ಕಾರದ ಆರ್ಥಿಕ ನೆರವಿಲ್ಲದೆ KHB ಹಣದಿಂದಲೇ ಕ್ರೀಡಾಂಗಣ ನಿರ್ಮಾಣ ಆಗಲಿದೆ ಎಂದು ಶಿವಲಿಂಗೇಗೌಡರು ಹೇಳಿದ್ದಾರೆ ಎಂದು ಸಿಎಂ ಉಲ್ಲೇಖಿಸಿದರು.

ಖಾಲಿ ಇರುವ KHB ನಿವೇಶನಗಳ ಮಾರಾಟದಿಂದ KHB ಗೆ 20ಸಾವಿರ ಕೋಟಿ ಆದಾಯ ಬರುವ ಅಂದಾಜಿದೆ. ನೆತ್ತಿ ಮೇಲೆ ಸೂರು ಇರಬೇಕು ಎನ್ನುವುದು ಪ್ರತಿಯೊಬ್ಬರ ಆಸೆ. ಈಗ ಭೂಮಿ ಬೆಲೆ ಹೆಚ್ಚುತ್ತಿರುವುದರಿಂದ ಬಡ, ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ kHB ನಿವೇಶನಗಳನ್ನು ನಿರ್ಮಿಸಿ ಒದಗಿಸುತ್ತಿದೆ ಎಂದರು.

ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಜಿಗಣಿ ಹೋಬಳಿಯ ಪ್ರಮುಖ ಸಂಪರ್ಕ ರಸ್ತೆ ನಿರ್ಮಾಣಕ್ಕೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಧಿಕಾರಿಗಳು ಈ ಕೆಲಸವನ್ನೂ ಆರಂಭಿಸುತ್ತಾರೆ. ಕ್ರೀಡಾಂಗಣ, ರಸ್ತೆ ಮಾತ್ರವಲ್ಲದೆ ವಸತಿ ಇಲಾಖೆ ಈ ಬಾರಿ ಇಲ್ಲಿಯವರೆಗೂ 3 ಲಕ್ಷಕ್ಕೂ ಹೆಚ್ಚು ಮನೆ ಮತ್ತು ನಿವೇಶನಗಳನ್ನೂ ರಾಜ್ಯದಲ್ಲಿ ನೀಡಲಾಗಿದೆ ಎಂದರು.

ಹೀಗಾಗಿ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಸಮಗ್ರ ಅಭಿವೃದ್ಧಿಗೆ ನಾವು ನಾಂದಿ ಹಾಡಿದ್ದೇವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ವಸತಿ ಸಚಿವ ಜಮೀರ್ ಅಹಮದ್, ಕೆಹೆಚ್ ಬಿ ಅಧ್ಯಕ್ಷರಾದ ಶಾಸಕ ಶಿವಲಿಂಗೇಗೌಡ, ಶಾಸಕ ಆನೇಕಲ್ ಶಿವಣ್ಣ, ಹಿರಿಯ ಶಾಸಕರುಗಳಾದ ಟಿ.ಬಿ.ಜಯಚಂದ್ರ, ಕೃಷ್ಣಪ್ಪ, ಮಾಜಿ ಸಂಸದ ಡಿ.ಕೆ.ಸುರೇಶ್, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶಾಸಕ ಅಬ್ಬಯ್ಯ, MLC ರಾಮೋಜಿಗೌಡ, ಗ್ಯಾರಂಟಿ ಅನುಷ್ಠಾನ ಸಮುತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

46 mins ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

50 mins ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

1 hour ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

2 hours ago

ಓದುಗರ ಪತ್ರ: ಫ್ಲೆಕ್ಸ್ ಮುಕ್ತವೆಂಬುದು ಸಾಂಪ್ರದಾಯಿಕ ಮಾತಾಗಬಾರದಲ್ಲವೇ?

ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…

2 hours ago

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

7 hours ago