ರಾಜ್ಯ

ಮಳೆ ಹಾನಿ ಕುರಿತು ಸಿಎಂ ಸಭೆ: ಪರಿಹಾರ ವಿತರಣೆಗೆ ಸಿದ್ದರಾಮಯ್ಯ ಏನಂದ್ರು…?

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದರಿಂದ 81,589  ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಆ.16)  ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಸಭೆ ನಡೆಯಿತು.
ಸಭೆಯಲ್ಲಿನ ನಿರ್ಣಯಗಳು ಇಂತಿವೆ.
ರಾಜ್ಯದಲ್ಲಿ ಜೂನ್‌ 1 ರಿಂದ ಆಗಸ್ಟ್‌ 15 ರ ವರೆಗೆ ವಾಡಿಕೆಗಿಂತ ಶೇ. 22 ರಷ್ಟು ಹೆಚ್ಚು ಮಳೆಯಾಗಿದ್ದು,  ಚಾಮರಾಜನಗರ, ಮಂಡ್ಯ ತುಮಕೂರಿನಲ್ಲಿ ಅತ್ಯಧಿಕ ಮಳೆಯಾಗಿದೆ. 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಬಾರಿ ಇಡೀ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ ನಾಲ್ಕು ವಾರಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಿರುಗುಪ್ಪ, ದೇವದುರ್ಗ, ಔರಾದ್‌, ಬೀದರ್‌, ಕಮಲಾನಗರ, ಹುಬ್ಬಳ್ಳಿ, ಶಹಾಪುರ, ಯಾದಗಿರಿ ಮೊದಲಾದ ಒಂಬತ್ತು ತಾಲ್ಲೂಕುಗಳಲ್ಲಿ ಈಗ ಕಡಿಮೆ ಮಳೆ ಇದೆ. ಆದರೆ ಈ ತಾಲ್ಲೂಕುಗಳಲ್ಲಿಯೂ ಉತ್ತಮ ಮಳೆಯಾಗುವುದಾಗಿ ಮುನ್ಸೂಚನೆ  ಬಂದಿದೆ. ರಾಜ್ಯಾದ್ಯಂತ 82 ಲಕ್ಷ ಹೆಕ್ಟೇರ್‌ ಗುರಿಗೆ ಎದುರಾಗಿ 7೦ ಲಕ್ಷ ಹೆಕ್ಟೇರ್‌ ಬಿತ್ತನೆ ಆಗಿದೆ. ಈ ಬಾರಿ ಗುರಿ ಮೀರಿ ಸಾಧನೆ ಆಗುವ ನಿರೀಕ್ಷೆ ಇದೆ. ಮುಂಗಾರು ಪೂರ್ವ ಬಿತ್ತನೆ ಆಗಿರುವ ಉದ್ದು ಮತ್ತು ಹೆಸರು ಕಟಾವಿಗೆ ಬಂದಿದೆ.  ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿವಿಧ ಏತ ನೀರಾವರಿ ಯೋಜನೆಗಳಡಿ ಎಲ್ಲೆಲ್ಲಿ ಅವಕಾಶವಿದೆಯೋ ಅಲ್ಲೆಲ್ಲ ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಆ ಮೂಲಕ ಅಂತರ್ಜಲ ಮಟ್ಟ, ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗುವುದು ಎಂದು ಸೂಚಿಸಲಾಯಿತು.
ರಾಜ್ಯದ ಜಲಾಶಯಗಳು ಒಟ್ಟು ಶೇ. 89 ರಷ್ಟು ಭರ್ತಿ ಆಗಿವೆ. ಈ ಹಿನ್ನೆಲೆಯಲ್ಲಿ ಕೆರೆಗಳನ್ನು ತುಂಬಿಸುವಂತೆ ಹಾಗೂ ಮಳೆ ಮುನ್ಸೂಚನೆ ಆಧರಿಸಿ, ಮುಂಚಿತವಾಗಿಯೇ ಸೂಕ್ತ ಪ್ರಮಾಣದ ನೀರನ್ನು ಜಲಾಶಗಳಿಂದ ಹೊರಗೆ ಬಿಡುವ ಮೂಲಕ, ಮಳೆಯಾದಾಗ ಜಲಾಶಯಗಳಲ್ಲಿ ಏಕಾಏಕಿ ನೀರಿನ ಸಂಗ್ರಹ ಹೆಚ್ಚಾಗಿ ಪ್ರವಾಹ ಉಂಟಾಗುವುದನ್ನು ತಡೆಗಟ್ಟಲು ಸೂಚಿಸಿದರು. ಈ ಕುರಿತು ಸರ್ಕಾರದಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗಳ ನಡುವೆ ಸಮನ್ವಯ ಇರಬೇಕು ಎಂದು ಸೂಚಿಸಲಾಗಿದೆ.
ಸೇತುವೆಗಳ ಫಿಟ್‌ನೆಸ್‌ಗಳ ಬಗ್ಗೆ ವರದಿಯನ್ನು ಲೋಕೋಪಯೋಗಿ ಇಲಾಖೆಯಿಂದ ಪಡೆಯಬೇಕು. ಸಂಪರ್ಕ ರಸ್ತೆಗಳು ಕುಸಿದಿದ್ದರೆ ಅವುಗಳನ್ನು ಸರಿಪಡಿಸಿ, ವಾಹನ ಸಂಚಾರಕ್ಕೆ ಸುಗಮಗೊಳಿಸಬೇಕು. ಎಲ್ಲಾ ಸೇತುವೆ, ರಸ್ತೆಗಳನ್ನು ನಿರಂತರವಾಗಿ ಪರಿಶೀಲನೆ ನಡೆಸಿ ಯಾವುದೇ ಅನಾಹುತವಾಗದಂತೆ ಎಚ್ಚರಿಕೆ ವಹಿಸಬೇಕು.  ಮುಳುಗು ಸೇತುವೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಬೇಕು. ಯಾವುದೇ ಕಾರಣಕ್ಕೂ ವಾಹನ ಸಂಚರಿಸದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು.
ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಒಟ್ಟು 67 ಸಾವು ಸಂಭವಿಸಿದ್ದು, 66 ಪ್ರಕರಣಗಳಲ್ಲಿ 329 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಅಂಗನವಾಡಿ , ಶಾಲೆ ಕಟ್ಟಡಗಳ, ಸೇತುವೆಗಳು, ಕರೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಳ್ಳಲು ಸೂಚಿಸಲಾಗಿದೆ. ಲೆನಾಡು, ಕರಾವಳಿ ಭಾಗಗಳಲ್ಲಿ ಇರುವ ಹಳೇ ಶಾಲಾ ಕಟ್ಟಡಗಳನ್ನು ಗುರುತಿಸಿ, ಕ್ರಿಯಾ ಯೋಜನೆಯಲ್ಲಿ ಆದ್ಯತೆ ಮೇರೆಗೆ ದುರಸ್ತಿ ಪಡಿಸಬೇಕು.
ಪಂಚಾಯತ್‌ ಮಟ್ಟದಲ್ಲಿ ಟಾಸ್ಕ್‌ ಫೋರ್ಸ್‌ ರಚಿಸಸಲಾಗಿದೆ. 20 ಸಾವಿರ ರೂ. ಅನುದಾನ ಒದಗಿಸಲಾಗಿದೆ. ಸಾವು ನೋವು ತಪ್ಪಿಸುವುದು ನಮ್ಮ ಆದ್ಯತೆ. ಗ್ರಾಮ ಪಂಚಾಯತ್‌ ಟಾಸ್ಕ್‌ ಫೋರ್ಸ್‌ ಬಲಪಡಿಸಲು ಕ್ರಮ ಕೈಗೊಳ್ಳಬೇಕು. ಮನೆ ಕುಸಿತ, ನೀರಿನಲ್ಲಿ ಕೊಚ್ಚಿ ಹೋಗುವಂತಹ ಪ್ರಕರಣಗಳಲ್ಲಿ ಸಾವು ನೋವು ತಪ್ಪಿಸಲು ಸಾಧ್ಯವಿದೆ. ಶಿಥಿಲವಾದ ಮನೆಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಗ್ರಾಮಮಟ್ಟದಲ್ಲಿ ಮೊದಲೇ ಗುರುತಿಸಬೇಕು. ಟ್ಟು 1283 ಮನೆಗಳು ಶೇ. 75 ಕ್ಕಿಂತ ಹೆಚ್ಚು ಹಾನಿಗೊಳಗಾಗಿದೆ. ಅದರಲ್ಲಿ 879 ಪ್ರಕರಣಗಳಲ್ಲಿ ತಲಾ 1.2೦ ಲಕ್ಷ ರೂ. ನಂತೆ 10.54 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಇದರೊಂದಿಗೆ ದೇವರಾಜ ಅರಸು ವಸತಿ ಯೋಜನೆಯಡಿ ಮನೆ ಮಂಜೂರು ಮಾಡಲಾಗುವುದು. ಈಗಾಗಲೇ 500 ಮನೆ ಮಂಜೂರು ಮಾಡಲಾಗಿದೆ.
2817 ಕುಟುಂಬಗಳಿಗೆ ಬಟ್ಟೆ ಬರೆ ಹಾನಿಗಾಗಿ 2500 ರೂ. ನಂತೆ ಹಾಗೂ 2811 ಕುಟುಂಬಗಳಿಗೆ ಗೃಹೋಪಯೋಗಿ ಸಾಮಗ್ರಿಗಳ ಹಾನಿಗೆ ತಲಾ 2500 ರಂತೆ ಒಟ್ಟು 1.40 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಜ್ಯದಲ್ಲಿ ಮನೆ ಕುಸಿದು 29 ಸಾವು ಸಂಭವಿಸಿದ್ದು, ನಗರ ಮತ್ತು ಗ್ರಾಮ ಪ್ರದೇಶಗಳಲ್ಲಿ ಶಿಥಿಲಗೊಂಡ ಮನೆಗಳಲ್ಲಿರುವವರನ್ನು ಖಾಲಿ ಮಾಡಿ ಅವರಿಗೆ ಪುನರ್ವಸತಿ ಕಲ್ಪಿಸಬೇಕು. ವಾಹ ಇರುವಾಗ ನೀರಿಗೆ ಇಳಿಯಲು ಬಿಡಬಾರದು, ಪೊಲೀಸರ ಸಹಕಾರದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯತ್‌, ಕಂದಾಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಈ ನಿಟ್ಟಿನಲ್ಲಿ ಮುಂಜಾಗರೂಕತೆ ಕ್ರಮಗಳನ್ನು ಕೈಗೊಳ್ಳಬೇಕು.
ಬೆಂಗಳೂರು ನಗರದಲ್ಲಿ ಕಂಟ್ರೋಲ್‌ ರೂಂ ಗಳನ್ನು ಗುರುತಿಸಲಾಗಿದೆ. ದೊಡ್ಡ ಚರಂಡಿಗಳು ಓಪನ್‌ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್‌ ಮಾಡಲಾಗಿದೆ. ಇದರಿಂದ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ರಾಜ ಕಾಲುವೆಗಳ ಒತ್ತುವರಿ ತೆರವು ಮಾಡಬೇಕು ಎಂದು ಸೂಚಿಸಲಾಯಿತು. ಕೋಡಿಗೆ ಗೇಟ್‌ ಅಳವಡಿಸುವ ಮೂಲಕ, ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ ತಡೆಗಟ್ಟಲು ಸೂಚಿಸಲಾಯಿತು.
ಬೆಂಗಳೂರಿನಲ್ಲಿ ಅಧಿಕಾರಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಪ್ರತಿದಿನ ನಗರದ ಪರಿಸ್ಥಿತಿ ಕುರಿತು ಸಭೆ ನಡೆಸಿ ಪರಿಶೀಲಿಸಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಲಾಗಿದೆ. ವಲಯ ಆಯುಕ್ತರ ಸಭೆ ನಡೆಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹಾಗೂ ಎಂಜಿನಿಯರುಗಳಿಗೆ ಜವಾಬ್ದಾರಿ ನಿಗದಿ ಪಡಿಸಿ.  ಕರ್ತವ್ಯಲೋಪ ಎಸಗಿದರೆ, ಮುಲಾಜಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಸಂಸ್ಥೆಗಳಾದ ಬಿಡಿಎ, ಬಿಡಬ್ಲ್ಯುಎಸ್ ಎಸ್‌ ಬಿ, ಬಿಎಂಆರ್‌ ಸಿ ಎಲ್‌, ಬಿಬಿಎಂಪಿ ಮೊದಲಾದವುಗಳ ನಡುವೆ ಸಮನ್ವಯ ವಹಿಸಲು ಸೂಚಿಸಲಾಯಿತು. ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿಗಳು ಎಚ್ಚರಿಕೆಯಿಂದ ಇರಲು ಸೂಚಿಸಬೇಕು. ನಗರ ಮತ್ತು ಪಟ್ಟಣಗಳಲ್ಲಿ ಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಚರಂಡಿಗಳ ಸ್ವಚ್ಚತೆಯನ್ನು ನಿರಂತರವಾಗಿ ಮಾಡಬೇಕು. 210ಕೋಟಿ ರೂ. ರಾಜ್ಯ ಹೆದ್ದಾರಿಗಳ ದುರಸ್ತಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಪ್ರವಾಹ ಸಂದರ್ಭದಲ್ಲಿ ಉದ್ಭವವಾಗಬಹುದಾದ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಡೆಂಗ್ಯು ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಚಿಕುನ್‌ಗುನ್ಯಾ, ಮಲೇರಿಯಾ ರೋಗ ಹರಡದಂತೆ ಕೂಡ ಎಚ್ಚರಿಕೆ ವಹಿಸುವಂತೆ ಸೂಚಿಸಲಾಯಿತು.
ಪ್ರವಾಹ, ಭಾರಿ ಮಳೆ ಸಂದರ್ಭದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡರೆ, ಕೂಡಲೇ ಸರಿಪಡಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಯಿತು. ಅಗತ್ಯವಿರುವ ಟ್ರಾನ್ಸ್‌ಫಾರ್ಮರ್‌ಗಳು, ಕಂಬಗಳನ್ನು ಲಭ್ಯಗೊಳಿಸಲು ಸೂಚಿಸಲಾಯಿತು. ಟ್ಟಾರೆಯಾಗಿ ಎಲ್ಲ ಇಲಾಖೆಗಳೂ ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಲಾಗಿದೆ.
ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು,  ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಉಮಾ ಮಹಾದೇವನ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…

8 mins ago

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…

38 mins ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

1 hour ago

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…

1 hour ago

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ: ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…

2 hours ago

ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸ್‌ ಹಿಂಪಡೆದ ರಾಜ್ಯ ಸರ್ಕಾರ

ತುಮಕೂರು: 70 ಲಕ್ಷ ಕರೆಂಟ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…

2 hours ago