ಬೆಂಗಳೂರು: ಇಂದು ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಾರಿಗೆ ನೌಕರರ ಜೊತೆ ಹೈವೋಲ್ಟೇಜ್ ಸಭೆ ನಡೆಸಲಿದ್ದು, ನೌಕರರಿಗೆ ಗುಡ್‌ನ್ಯೂಸ್ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
25% ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಪಟ್ಟು ಹಿಡಿದಿದ್ದು, ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಗೆ ಸಾರಿಗೆ ನೌಕರರ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಹೈವೋಲ್ಟೇಜ್ ಸಭೆ ನಡೆಸಲಿದ್ದು, ನೌಕರರಿಗೆ ಗುಡ್‌ನ್ಯೂಸ್ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದಂತೆ ಅಲರ್ಟ್ ಆದ ರಾಜ್ಯ ಸರ್ಕಾರ ಸಾರಿಗೆ ನೌಕರರ ಮನವಿ ಆಲಿಸಿ ಅವರ ಭರವಸೆಗಳನ್ನು ಈಡೇರಿಸಲು ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಕೊಡುವ ಸಾಧ್ಯತೆಯಿದೆ .





