Mysore
18
few clouds

Social Media

ಶನಿವಾರ, 24 ಜನವರಿ 2026
Light
Dark

ಹಾಲಿನ ದರ ಹೆಚ್ಚಳಕ್ಕೆ ಮಣಿಯದ ಸಿಎಂ : ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು : ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ನಂತರವೇ ಬಹುನಿರಿಕ್ಷೀತ ಹಾಲಿನ ದರವನ್ನು ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಕ್ಕೂಟಗಳಿಗೆ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಸೋಮನಾಥ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಾದ ಕೆ.ಎನ್.ರಾಜಣ್ಣ, ಕೆ, ವೆಂಕಟೇಶ್ , ಕೆಎಂಎಪ್ ಅಧ್ಯಕ್ಷ ಭೀಮಾ ನಾಯ್ಕ್, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದರು.

ಇದೇ ಗುರುವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ಒಕ್ಕೂಟಗಳ ಬೇಡಿಕೆಯಂತೆ ಹಾಲಿನ ದರ ಪರಿಷ್ಕರಣೆ ಮಾಡುವ ಬಗ್ಗೆ ನಿರ್ಧಾರ ಮಾಡುವುದಾಗಿ ಆಭಯ ನೀಡಿದ್ದಾರೆ.

ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಎಂದು ಸ್ಪಷ್ಟಪಡಿಸಿದರು.

ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು.ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಸಿಎಂ ಸೂಚಿಸಿದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು ಎಂದು ಹೇಳಿದರು.

ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ.ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಒಕ್ಕೂಟಗಳು ಮಾಡಿಕೊಂಡ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಲಿಲ್ಲ.

ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ.ಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು  ಎಂದು ಪ್ರತಿಪಾದಿಸಿದರು.

Tags:
error: Content is protected !!