ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿದರು.
ಜನವರಿ 22 ರಂದು ನಡೆದಿದ್ದ ಕಾರ್ಯಕ್ರಮದಲ್ಲಿ ಈ ಬೇಡಿಕೆಗಳ ಈಡೇರಿಸಿ ಅಗತ್ಯ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳು ನುಡಿದಂತೆ ನಡೆದಿದ್ದು ಇಂದು ಭೂಮಿಪೂಜೆ ನೆರವೇರಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.