ರಾಜ್ಯ

ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ನಮ್ಮ ಪಕ್ಷದವರು ಭೇಟಿಯಾದ ತಕ್ಷಣ ಸಿಎಂ ಹುದ್ದೆಗಾಗಿ ಭೇಟಿಯಾಗಿದ್ದಾರೆಂದು ಹೇಳುವುದು ತಪ್ಪು. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದವರು ಮುಡಾ ಪ್ರಕರಣಕ್ಕಿಂತಲೂ ಮುಂಚೆ ದೆಹಲಿಗೆ ಹೋಗಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ ಗಾಂಧಿ ಸೇರಿದಂತೆ ಇನ್ನುಳಿದ ನಾಯಕರನ್ನು ಸಹ ಭೇಟಿಯಾಗಿದ್ದರು. ಅವರು ಭೇಟಿಯಾದ ತಕ್ಷಣ ಸಿಎಂ ಹುದ್ದೆಗಾಗಿಯೇ ಭೇಟಿ ನೀಡಿದ್ದಾರೆ ಎಂಬಂತೆ ಯಾಕೆ ಹೋಲಿಕೆ ಬಿಂಬಿಸಲಾಗುತ್ತಿದೆಯೋ ತಿಳಿಯದು ಎಂದರು.

ಕಾಂಗ್ರೆಸ್‌ನ ರಾಜ್ಯ ಮುಖಂಡರೆಲ್ಲರೂ ದೆಹಲಿಯಲ್ಲಿರುವ ಮುಖಂಡರೊಡನೆ ಭೇಟಿಯಾಗಿ ಮಾತನಾಡುವುದು ಸರ್ವೇ ಸಾಮಾನ್ಯ. ಆದರೆ, ಮುಡಾ ಪ್ರಕರಣ ಬರುತ್ತಿದ್ದಂತೆ ಹೀಗೆಂದುಕೊಳ್ಳುವುದು ತಪ್ಪು. ಮುಖ್ಯಮಂತ್ರಿ ಸ್ಥಾನದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿರಲಿದೆ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿದ್ದಾರೆ. ಅವರೇ ಮುಂದಿನ ದಿನಗಳಲ್ಲಿಯೂ ಕೂಡ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

 

 

ಆಂದೋಲನ ಡೆಸ್ಕ್

Recent Posts

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

1 hour ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

2 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

3 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

5 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

10 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

10 hours ago