Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಅಟ್ಲಾಂಟಿಕ್‌ ಮಹಾಸಾಗರದಲ್ಲಿ ದಾಖಲೆ ಬರೆದ ಅನನ್ಯ : ಸಿಎಂ ಶ್ಲಾಘನೆ

ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿಯಾದರು.

ಕಾವೇರಿ ನಿವಾಸದಲ್ಲಿ ಭೇಟಿಯಾದ ಅನನ್ಯ ಅವರನ್ನು ಮುಖ್ಯಮಂತ್ರಿ ಮುಕ್ತ ಕಂಠದಿಂದ ಶ್ಲಾಘಿಸಿದರು.

ಅನಾಥ ಹಾಗೂ ಬಡಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಚಾಮರಾಜನಗರದ ದೀನಬಂಧು ಶಾಲೆಯ ಮಕ್ಕಳ ನೆರವಿಗಾಗಿ ಇಂಥದ್ದೊಂದು ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಅನನ್ಯ ಅವರ ಕಾಳಜಿಯನ್ನು ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಶಂಸಿಸಿದರು.

ಅನನ್ಯಪ್ರಸಾದ್ ಅವರು ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಮೊಮ್ಮಗಳು.

Tags:
error: Content is protected !!