ರಾಜ್ಯ

ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವಿಗೆ ಸಿಎಂ ಭರವಸೆ

ಬೆಂಗಳೂರು: ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ವೇಳೆ ಭರವಸೆ ನೀಡಿದ್ದಾರೆ.

1949ರಲ್ಲಿ ಆರಂಭವಾದ ಪತ್ರಕರ್ತರ ಸಹಕಾರ ಸಂಘ ರಾಜ್ಯದ ಪತ್ರಕರ್ತರ ಏಕೈಕ ಹಣಕಾಸಿನ ಪ್ರಾತಿನಿಧಿಕ ಸಂಸ್ಥೆ. ಈ ಸಂಸ್ಥೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಪತ್ರಕರ್ತರನ್ನು ಸದಸ್ಯರನ್ನಾಗಿ ಹೊಂದಿದೆ. ಆಡಿಟ್ ವರ್ಗೀಕರಣದಲ್ಲಿ ನಮ್ಮ ಸಂಸ್ಥೆ ‘ಎ’ ಶ್ರೇಣಿ ಪಡೆದಿರುವ ಸಂಸ್ಥೆ. ಅತ್ಯುತ್ತಮ ಸಹಕಾರ ಸಂಘ ಎಂಬ ಪ್ರಶಸ್ತಿಗೂ ಪಾತ್ರವಾಗಿದೆ. ನಿರಂತರ ಏಳು ದಶಕಗಳಿಂದ ನಮ್ಮ ಪತ್ರಕರ್ತರ ಸಹಕಾರ ಸಂಘ ಸೇವೆ ಸಲ್ಲಿಸುತ್ತಿದೆ.

ಪತ್ರಕರ್ತರ ಸಂಘದ ಸದಸ್ಯರಿಂದ ಆರೋಗ್ಯದ ನೆರವಿನ ಬೇಡಿಕೆ ದಿನೇದಿನೆ ಹೆಚ್ಚಾಗುತ್ತಿದೆ. ಹೀಗಾಗಿ ಪತ್ರಕರ್ತರ ಆರೋಗ್ಯದ ಅನುಕೂಲಕ್ಕಾಗಿ ಆರ್ಥಿಕ ನೆರವು ಬೇಕಿದೆ. ವೈದ್ಯಕೀಯ ನೆರವಿಗೆ ರಾಜ್ಯ ಸರ್ಕಾರದಿಂದ ಸುಮಾರು 5 ಕೋಟಿ ರೂ. ಅನುದಾನ ನೀಡಬೇಕು ಎಂದು ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಘದ ಶ್ರೇಯೋಭಿವೃದ್ಧಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ಇದರ ಜೊತೆಗೆ ಕೆಲವು ಹಿರಿಯ ಪತ್ರಕರ್ತರು ಸಂಘದಲ್ಲಿ ಸಾಲ ಪಡೆದಿದ್ದು, ಕೊರೋನಾ ಸಮಯದಲ್ಲಿ ಹಾಗೂ ಆನಂತರ ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ. ಕೊರೋನಾ ಆರ್ಥಿಕ ಸಂಕಷ್ಟದಿಂದ ನಿಗಧಿತ ಸಮಯಕ್ಕೆ ಸಾಲ ಮರು ಪಾವತಿ ಮಾಡದೆ ಸುಸ್ತಿದಾರರಾಗಿದ್ದಾರೆ. ಹೀಗಾಗಿ ಸಂಸ್ಥೆಗೆ ಆರ್ಥಿಕ ನೆರವು ತೀರಾ ಅಗತ್ಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಪತ್ರಕರ್ತರ ಸಹಕಾರ ಸಂಘಕ್ಕೆ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳನ್ನು ಮನವಿ ಮಾಡಿಕೊಂಡಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಕರ್ತರ ಸಹಕಾರ ಸಂಘಕ್ಕೆ ನೆರವು ನೀಡುವ ಭರವಸೆ ನೀಡಿದರು.

ನಿಗಮಗಳ ನೇಮಕದಲ್ಲಿ ಸಂಸ್ಥೆಯನ್ನೂ ಪರಿಗಣಿಸಿ
ಮಾಧ್ಯಮಕ್ಕೆ ಸಂಬಂಧಿಸಿದ ಮಿಗಮ ಮಂಡಳಿ ಅಥವಾ ಅಕಾಡೆಮಿಗಳಿಗೆ ನೇಮಕ ಮಾಡುವ ಸಂದರ್ಭದಲ್ಲಿ ಪತ್ರಕರ್ತರ ಸಹಕಾರ ಸಂಘವನ್ನೂ ಪರಿಗಣಿಸಬೇಕು. ಸಹಕಾರ ಸಂಘದ ಪ್ರತಿನಿಧಿಗಳನ್ನು ನಿರ್ದೇಶಕರು ಹಾಗೂ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿಯೋಗದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ವಿನಂತಿಸಿಕೊಳ್ಳಲಾಯಿತು.

ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯರ್ಶಿ ಕೆ.ವಿ.ಪ್ರಭಾಕರ್, ಆಪ್ತ ಸಹಾಯಕರಾದ ಕೆ. ಗಿರೀಶ್ ಇದ್ದರು. ನಿಯೋಗದಲ್ಲಿ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮ್ಮಯ್ಯ, ಖಜಾಂಚಿ ಮೋಹನ್ ಕುಮಾರ್ ಬಿ.ಎಸ್. ನಿರ್ದೇಶಕರಾದ ರಮೇಶ್ ಹಿರೇಜಂಬೂರು, ಸೋಮಶೇಖರ್ ಕೆ.ಎಸ್.( ಸೋಮಣ್ಣ ) ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

2 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

2 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

2 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

3 hours ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

3 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

3 hours ago