ರಾಜ್ಯ

ಹಣಕಾಸಿನ ಪರಿಸ್ಥಿತಿ ಅವಲೋಕಿಸಿ ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ: ಸಿಎಂ

ಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆ ಕೈಗೊಂಡು ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ ಎಂದು ಮರುಪ್ರಶ್ನಿಸಿದರು.

ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣ ಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲವೆಂದರು.

ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ

ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವುದಾಗಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

10 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

10 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

12 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

15 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

16 hours ago