Mysore
20
overcast clouds
Light
Dark

ಸಿಎಂಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಬೇಕು : ಆರ್. ಅಶೋಕ್

ಬೆಂಗಳೂರು : ವಾಲ್ಮೀಕಿ ಹಗರಣ ಮತ್ತು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಆರ್‌ ಅಶೋಕ್‌, ಕಾಂಗ್ರೆಸ್‌ ವಿರುದ್ಧ ನಾವು ಪ್ರತಿಭಟನೆ ಮಾಡ್ತಿದ್ದೇವೆ. ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. ಸಿಎಂಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಬೇಕು. ಸದನದ ಒಳಗೂ ಹೋರಾಟ ಮಾಡುತ್ತೇವೆ. ಸಿಎಂ ಬಚಾವ್‌ ಆಗುವುದಕ್ಕೆ ನಿವೃತ್ತ ಜಡ್ಜ್‌ ಮೂಲಕ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದಾರೆ. ಸಿಎಂ ಬಚಾವ್‌ ಆಗೋಕೆ ನಿವೃತ್ತ ಜಡ್ಜ್‌ ಮುಖಾಂತರ ಇವರ ಮೇಲೆ ಆರೋಪ ಬಂದ್ರೆ ನ್ಯಾಯಾಂಗ ತನಿಖೆ ಆಗಬೇಕು. ಮುಡಾ ಕೇಸ್‌ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಇತಿಹಾಸದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ ೧೮೭ ಕೋಟಿ ಹಣ ಲೂಟಿ ಮಾಡಲಾಗಿದೆ. ಯಾವುದೇ ಸರ್ಕಾರ ಮಾಡಿರಲಿಲ್ಲ. ದಲಿತರ ಪರ ಇದ್ದೇವೆ ಅಂತಾ ಅವರ ಹಣ ಕಾಂಗ್ರೆಸ್‌ ಲೂಟಿ ಮಾಡಿದೆ ಎಂದು ವಾಗ್ದಾಳಿ ನಡೆಸಿದರು. ‌