ರಾಜ್ಯ

ಕಂದಾಯ ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳ ಪ್ರಕರಣಗಳು 1 ವರ್ಷದಲ್ಲಿ ಶೇ.36ರಷ್ಟು ಇತ್ಯರ್ಥ: ಸಿಎಂ ಸಿದ್ದರಾಮಯ್ಯ ಸಂತಸ

ಬೆಂಗಳೂರು: ಕಂದಾಯ ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳು ಕೇವಲ ಒಂದು ವರ್ಷದಲ್ಲಿ ಶೇ.36ರಷ್ಟು ಪ್ರಕರಣಗಳು ಇತ್ಯರ್ಥವಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು(ಜನವರಿ.29) ಕೃಷ್ಣಾದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಮಾತನಾಡಿ, ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿಯಾಗಿದ್ದು, 10 ವರ್ಷ ಮತ್ತು 5 ವರ್ಷಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ ಎಂದರು. ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಹೆಚ್ಚು ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ ಎಂದು ದಾಖಲೆ ಸಮೇತ ಮಾಹಿತ ನೀಡಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಈ ಪ್ರಕರಣಗಳಲ್ಲಿ ಬರೀ ಕ್ವಾಟಿಟಿ ವಿಲೇವಾರಿ ಆದರೆ ಸಾಲದು, ಕ್ವಾಲಿಟಿ ವಿಲೇವಾರಿ ಪ್ರಕರಣಗಳು ಇತ್ಯರ್ಥವಾದರೆ ಮಾತ್ರ ಮೇಲ್ಮನವಿಗಳಿಗೆ ಬ್ರೇಕ್‌ ಬೀಳುತ್ತದೆ. ಈ ದಿಕ್ಕಿನಲ್ಲಿ ಹೆಚ್ಚಿನ ಗಮನ ಹರಿಸಬೇಕು. ಅಲ್ಲದೇ ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಶೇ.65 ಪ್ರಕರಣಗಳಲ್ಲಿ ಒಂದು ದಿನದ ಒಳಗಾಗಿ ಮಾಡಲಾಗುತ್ತಿರುವುದು ಒಳ್ಳೆಯ ಸಂಗತಿ. ಅಟೋ ಮ್ಯುಟೇಶನ್‌ ಮೂಲಕ ಇದು ಸಾಧ್ಯವಾಗಿದ್ದು, ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್‌ ಪ್ಲಾನ್‌ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಬೇಕು ಎಂದು ಸೂಚಿಸಿದರು.

ಇನ್ನೂ ನಗರ ಪ್ರದೇಶಗಳಲ್ಲಿ ಮಾಸ್ಟರ್‌ ಪ್ಲಾನ್‌ ಅನ್ನು ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್‌, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಬೇಕ. ಈ ಬಗ್ಗೆ ಆದಷ್ಟು ಬೇಗನೆ ಮಾಸ್ಟರ್‌ ಪ್ಲಾನ್‌ ಸಿದ್ದಪಡಿಸಬೇಕು. ಅಲ್ಲದೇ ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ಇರಬಾರದು ಎಂದು ಅಧಿಕಾರಿಗಳಿಗೆ ಆದೇಶ ನೀಡಿದರು.

ಬಾಕಿ ಉಳಿದಿರುವ ಪ್ರಕರಣಗಳನ್ನು ತಹಶೀಲ್ದಾರ್‌ ಅವರು ತಮ್ಮ ವ್ಯಾಪ್ತಿಯಲ್ಲಿರುವ ಪ್ರಕರಣಗಳನ್ನು ಮೂರು ತಿಂಗಳೊಳಗಾಗಿ ವಿಲೇವಾರಿ ಮಾಡಬೇಕು. ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಾಗಿನಿಂದ 10 ಸಾವಿರಕ್ಕೂ ಹೆಚ್ಚು ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ. ಹೀಗಾಗಿ ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

1 hour ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

1 hour ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

2 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

2 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

2 hours ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

3 hours ago