ಬೆಂಗಳೂರು: ತಮಿಳುನಾಡಿಗೆ ರಾಜ್ಯದಿಂದ ಕಾವೇರಿ ನೀರು ಬಿಡುಗಡೆ ಸಂಬಂಧ CWMC ಆದೇಶ ವಿರೋಧಿಸಿ CWMA ಮುಂದೆ ಮೇಲ್ಮನವಿ ಸಲ್ಲಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ (ಜು.14) ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಭಾನುವಾರ ವಿಧಾನಸೌಧ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.
ಜು.11 ಕಾವೇರಿ ನೀರು ನಿಯಂತ್ರಣ ಸಮಿತಿಯ 3 ನೇ ಸಭೆ ನಡೆದು, ಜುಲೈ 12 ನೇ ದಿನಾಂಕದಿಂದ ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನ ಪ್ರತೀ ದಿನ 1ಟಿಎಂಸಿ ಯಂತೆ 20ಟಿಎಂಸಿ ನೀರು ಬಿಡಲು ಆದೇಶಿಸಿದ್ದಾರೆ.
ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 ಟಿಎಂಸಿ, ಜುಲೈನಲ್ಲಿ 31.24ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ 5ಟಿಎಂಸಿ ಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ. ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜು12 ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, CWMA ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೇವೆ.
ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ 63 % ಮಾತ್ರ ಭರ್ತಿ ನೀರು ಆಗಿದೆ. ಕಬಿನಿ ಜಲಾಶಯ ಭರ್ತಿಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ.
ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, CWMC ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಆಡ್ತೀವಿ ಎಂದು CWMC ಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದು ಮಾಹಿತಿ ನೀಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸಚಿವ ಸಂಪುಟದ ಸದಸ್ಯರು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮೋಹನ್ ಕಾತರಕಿ, ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ನೀರಾವರಿ ಹಾಗೂ ಕಾನೂನು ತಜ್ಞರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ನವದೆಹಲಿ: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು…
ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್…
ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ…
ಕೊಡಗು: ಮಾರ್ಚ್.3ರಂದು ಈ ವರ್ಷದ ಮೊದಲ ಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ. ಆಗಸದಲ್ಲಿ ನಡೆಯಲಿರುವ ಅಪರೂಪದ ವಿದ್ಯಾಮಾನ ಇದಾಗಿದ್ದು, ಈ ಗ್ರಹಣದ…
ಹುಣಸೂರು: ಹುಣಸೂರಿನಲ್ಲಿ ಒಣಗಿಡಮರಗಳಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹುಣಸೂರಿನ ತಾಲ್ಲೂಕು ಕಚೇರಿ ಬಳಿ ಈ ಘಟನೆ…
ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…