Mysore
25
clear sky

Social Media

ಶುಕ್ರವಾರ, 02 ಜನವರಿ 2026
Light
Dark

ನಿವೇಶನ ಕೊಟ್ಟಿರುವುದು ತಪ್ಪು ಎಂದರೆ 60 ಕೋಟಿ ಪರಿಹಾರ ಕೊಡಲಿ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯಲಾಗಿದೆ ಎಂಬ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ (ಜುಲೈ.4) ಮಾತನಾಡಿದರು.

ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ ಎಂದು ಸಿದ್ದರಾಮಯ್ಯ ಸಿಟ್ಟಾದರು.

ಅಕ್ಟೋಬರ್ 2023ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ.ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ಕೊಟ್ಟುಬಿಡಲಿ ಎಂದರು.

ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ ಕಡತ ತಂದಿಲ್ಲ ಎಂದು ಸಿಎಂ ಹೇಳಿ ತೆರಳಿದರು.

Tags:
error: Content is protected !!