Categories: ರಾಜ್ಯ

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಎಲ್ಲಾ ರೀತಿಯ ನೆರವು: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು:  ಕರ್ನಾಟಕ ದೇಶದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದ್ದು, ಇಲ್ಲಿನ ಉದ್ಯಮಸ್ನೇಹಿ ವಾತಾವರಣ, ಪ್ರತಿಭೆಗಳನ್ನು ಬಳಸಿಕೊಂಡು ಬಂಡವಾಳ ಹೂಡಿಕೆ ಮಾಡಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಭಾರತದಲ್ಲಿನ ಬ್ರಿಟಿಷ್‌ ಹೈಕಮಿಷನರ್‌ ಲಿಂಡೆ ಕ್ಯಾಮರೂನ್‌ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.

ಉದ್ಯಮಗಳಿಗೆ ಬೆಂಗಳೂರಿನಲ್ಲಿ ವಿಪುಲ ಅವಕಾಶಗಳಿದ್ದು, ಮುಂದಿನ ಫೆಬ್ರವರಿ ತಿಂಗಳಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಇಲ್ಲಿ ನಡೆಯಲಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಕ್ವಿನ್‌ ಸಿಟಿ ಯೋಜನೆಯಡಿ ಸಹ ಅವಕಾಶಗಳನ್ನು ಬಳಸಿಕೊಳ್ಳಬಹುದಾಗಿದೆ. ನಮ್ಮ ರಾಜ್ಯದ ಕೈಗಾರಿಕಾ ನೀತಿಯು ಅತ್ಯಂತ ಪ್ರಗತಿಶೀಲವಾಗಿದೆ. ರಾಜ್ಯದ ಬಹುತೇಕ ನಗರಗಳಿಗೆ ಉತ್ತಮ ವಿಮಾನಯಾನ ಸಂಪರ್ಕವಿದ್ದು, ಇಂತಹ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ತೊಡಗಿಸಲು ಸರ್ಕಾರ ಎಲ್ಲಾ ನೆರವು ಒದಗಿಸಲಿದೆ ಎಂದು  ಹೇಳಿದರು.

ಹೈಕಮಿಷನರ್‌ ಲಿಂಡೆ ಕ್ಯಾಮರೂನ್‌ ಮಾತನಾಡಿ, ಬೆಂಗಳೂರಿನಲ್ಲಿ ಹಲವು ಬ್ರಿಟಿಷ್‌ ಕಂಪೆನಿಗಳು ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ 15ಬ್ರಿಟಿಷ್‌ ಕಂಪೆನಿಗಳು ಭಾಗವಹಿಸುತ್ತಿವೆ. ಫೆಬ್ರವರಿಯಲ್ಲಿ ನಡೆಯಲಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಮತ್ತು ಏರೋ ಇಂಡಿಯಾ ಕಾರ್ಯಕ್ರಮದಲ್ಲಿ ಬ್ರಿಟನ್‌ನ ಹಲವು ನಿಯೋಗಗಳು ಭಾಗವಹಿಸಲಿವೆ ಎಂದರು.

ಪ್ರಸ್ತುತ ಕರ್ನಾಟಕದ ಸರ್ಕಾರಿ ಕಾಲೇಜುಗಳ 30 ವಿದ್ಯಾರ್ಥಿಗಳು 15 ದಿನಗಳ ಅಕಾಡೆಮಿಕ್‌ ಅಧ್ಯಯನದ ಮೇಲೆ ಲಂಡನ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬ್ರಿಟಿಷ್‌ ಹೈಕಮಿಷನ್ ಮತ್ತು ಕರ್ನಾಟಕ ಜಂಟಿ ಸಹಭಾಗಿತ್ವದಲ್ಲಿ ಸ್ಕಾಲರ್‌ಶಿಪ್‌ ಒದಗಿಸುವ ಪರಸ್ಪರ ಒಡಂಬಡಿಕೆ ರೂಪಿಸಲಾಗಿದೆ. ಇದರನ್ವಯ ಕರ್ನಾಟಕದಲ್ಲಿ ಅದರಲ್ಲೂ ಮುಖ್ಯವಾಗಿ ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಪದವಿ ಪಡೆದ ಹೆಣ್ಣು ಮಕ್ಕಳಿಗೆ ಯುಕೆಯಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಸ್ಕಾಲರ್‌ಶಿಪ್‌ ಒದಗಿಸಲಾಗುವುದು. ಮೂರು ವರ್ಷಗಳ ಒಡಂಬಡಿಕೆ ಇದಾಗಿದ್ದು, ಈ ವರ್ಷ 15 ಮಂದಿಗೆ ಸ್ಕಾಲರ್‌ಶಿಪ್‌ ಒದಗಿಸಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago