Mysore
29
few clouds

Social Media

ಮಂಗಳವಾರ, 27 ಜನವರಿ 2026
Light
Dark

ಹಿರಿಯ ನಟಿ ಸರೋಜಾದೇವಿ ನಿಧನಕ್ಕೆ ಸಿಎಂ ಹಾಗೂ ಡಿಸಿಎಂ ಸಂತಾಪ

CM siddaramaiah and DCM D K Shivakumar condole the death of Saroja Devi

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದಾರೆ. ನಟಿಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕನ್ನಡದ ಹಿರಿಯ ನಟಿ ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು. ಹಲವು ಚಿತ್ರಗಳಲ್ಲಿ ನಟಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಹ ಟ್ವೀಟ್‌ ಮಾಡಿದ್ದು, ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ. ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

Tags:
error: Content is protected !!