CM siddaramaiah and DCM D K Shivakumar condole the death of Saroja Devi
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದಾರೆ. ನಟಿಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕನ್ನಡದ ಹಿರಿಯ ನಟಿ ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು. ಹಲವು ಚಿತ್ರಗಳಲ್ಲಿ ನಟಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಹ ಟ್ವೀಟ್ ಮಾಡಿದ್ದು, ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ. ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…