ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡಿದ್ದಾರೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನುಮಾನ್ ಚಾಲೀಸ್ ಪಠಾಣ್ ಮಾಡಿದವರ ಮೇಲೆ ಎಫ್‌ಐಆರ್ ಹಾಕುತ್ತೀರಿ. ಇದು ಸರಿಯಲ್ಲ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಯಾರು ಬೇಕಾದರೂ 6 ಗಂಟೆಗೆ ಎದ್ದು ನಮಾಜ್ ಮಾಡಬಹುದು. ನೀವು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದೀರಾ ಅಥವಾ ಇದನ್ನು ಇಸ್ಲಾಮಿಕ್ ರಾಷ್ಟ್ರ ಅಂದ್ಕೊಂಡಿದ್ದೀರಾ ಎಂದ ಅವರು ಸಿಎಂ ಸಿದ್ದರಾಮಯ್ಯನವರ ನಡೆಯನ್ನು ಖಂಡಿಸುತ್ತೇನೆ. ಇದು ವೋಟ್ಬ್ಯಾಂಕ್ ರಾಜಕಾರಣ ಎಂದರು.
ನನ್ನ ಮಕ್ಕಳು ರಾಹುಲ್ ಗಾಂಧಿ ತರ ಆಗಬೇಕೆಂಬ ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಅವರು ಹಾಗೆ ಹೇಳದೆ ಹೋದರೇ ಅವರ ನೌಕರಿ ಹೋಗುತ್ತೆ. 75 ವರ್ಷ ಇವರು ಸುಳ್ಳು ಹೇಳಿದ್ದಾರೆ. ನೀವು ಸತ್ಯಹರಿಶ್ಚಂದ್ರರಾಗಿದ್ದರೆ ಜನರು ಯಾಕೆ ನಿಮ್ಮನ್ನು ಮೂಲೆಗುಂಪು ಮಾಡುತ್ತಿದ್ದರು. ನೀವು ಹುಚ್ಚರ ರೀತಿ ಮಾತಾಡಿದ್ದಕ್ಕೆ ಜನ ಸೋಲಿಸಿದ್ದಾರೆ. ಕಾಂಗ್ರೆಸ್ನವರು ಮೋಸಗಾರರು. ಸುಳ್ಳು ಹೇಳಿ ರಾಹುಲ್ ಗಾಂಧಿ ಫಾರಿನ್ಗೆ ಹೋಗುತ್ತಾರೆ ಎಂದು ಕಿಡಿ ಕಾರಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…