ಬೆಂಗಳೂರು: ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜಪಿ-ಜೆಡಿಎಸ್ ಟೀಕೆಗೆ ತಿರುಗೇಟು ನೀಡಿದರು.
ನಗರದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು ಆದರೆ, ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಅಧಿವೇಶನದಲ್ಲಿ ವಿರೋಧ ಪಕ್ಷಗಳ ಹೊಣೆಗೇಡಿತನವನ್ನು ಪತ್ರಿಕಾಗೋಷ್ಠಿಯಲ್ಲಿ ಸಿಎಂ ಎಳೆ ಎಳೆಯಾಗಿ ಬಿಚ್ಚಿಟ್ಟರು.
ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡ್ತಾರೆ. ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಟಾಂಗ್ ಕೊಟ್ಟರು.
ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ+ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಹಿಂದಿನ ಬಾರಿಗಿಂತ ಹೆಚ್ಚು ಸೀಟು, ಮತ ಗಳಿಸಲು ಸಾದ್ಯವಾಗಲಿಲ್ಲ. ನಮಗೆ ಕಳೆದ ಲೋಕಸಭಾ ಚುನಾವಣೆಗಿಂತ ಶೇ13 ರಷ್ಟು ಮತಗಳನ್ನು ಈ ಚುನಾವಣೆಯಲ್ಲಿ ಹೆಚ್ಚು ಗಳಿಸಿದೆವು. ಇದರಿಂದ ಹತಾಶರಾಗಿ ಮತ್ತೆ ಜನರ ವಿಶ್ವಾಸ ಗಳಿಸಲು ತಪ್ಪು ದಾರಿಯಲ್ಲಿ ವಾಮ ಮಾರ್ಗ ಹಿಡಿದಿದ್ದಾರೆ ಎಂದು ಕಿಡಿಕಾರಿದರು.
ಯಾವುದೇ ಅಧಿಕೃತ ದಾಖಲೆಗಳಿಲ್ಲದೆ-ಅರೆ ಬರೆ ಪತ್ರಗಳನ್ನು ತೋರಿಸಿ ರಾಜ್ಯದ ಜನರ ಮುಂದೆ ಬಿಜೆಪಿ+ಜೆಡಿಎಸ್ ನಡೆಸಿದ ಜಂಟಿ ಡ್ರಾಮಾಗಳಿಗೆ ಅಧಿಕೃತ ದಾಖಲೆಗಳನ್ನು ಮುಂದಿಟ್ಟು ಸಿಎಂ ಸಿದ್ದರಾಮಯ್ಯ ತಕ್ಕ ಉತ್ತರ ನೀಡಿದರು.
ಮೂಡಾ ಪ್ರಕರಣದ ಪ್ರತೀ ಪತ್ರಗಳು, ಪ್ರತೀ ದಾಖಲೆಗಳನ್ನು ರಾಜ್ಯದ ಜನತೆಯ ಮುಂದೆ ಮಂಡಿಸಿ ಬಿಜೆಪಿ+ಜೆಡಿಎಸ್ ಜಂಟಿ ಸುಳ್ಳುಗಳಿಗೆ ಬಿಜೆಪಿ ಜೆಡಿಎಸ್ ಸದಸ್ಯರ ಸಮ್ಮುಖದಲ್ಲೇ ಆಗಿರುವ ಮೂಡಾ ನಿರ್ಣಯಗಳನ್ನು ಪತ್ರಿಕಾಗೋಷ್ಠಿಯಲ್ಲಿ ಓದುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.
ಇನ್ನು ಆಗ ಮೂಡದಲ್ಲಿದ್ದ ರಾಮದಾಸ್, ನಾಗೇಂದ್ರ, ಜಿಟಿ ದೇವೇಗೌಡ ಯಾವ ಪಕ್ಷದವರು? ನಾವೇನು ಇಂಥಾ ಜಾಗದಲ್ಲೇ ನಿವೇಶನ ಕೇಳಿಲ್ಲ. ಬಿಜೆಪಿಯವರ ಅವಧಿಯಲ್ಲೇ ಅವರೇ ನಿರ್ಣಯ ಕೈಗೊಂಡು ಕೊಟ್ಟಿರುವ ನಿವೇಶನ ಇದು. ಮತ್ತೇಕೆ ರಾಜ್ಯದ ಜನತೆಯ ಮುಂದೆ ಸುಳ್ಳು ಹೇಳಿ ಸಿಕ್ಕಿಕೊಳ್ಳುತ್ತಿದ್ದೀರಿ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.
ಕುಟುಂಬದಲ್ಲಿ ಅನ್ಯೋನ್ಯರಾಗಿದ್ದವರನ್ನು ಪರಸ್ಪರ ಎತ್ತಿ ಕಟ್ಟಿ ಮನೆ ಮುರುಕ ರಾಜಕಾರಣ ಮಾಡಿದರೆ ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಇದರಲ್ಲಿ ನನ್ನದಾಗಲಿ, ನಮ್ಮ ಪತ್ನಿಯವರದ್ದಾಗಲಿ, ನಮ್ಮ ಬಾಮೈದುನನ ಪಾತ್ರ ಎಲ್ಲಿದೆ ಹೇಳಿ? ಎಂದು ದಾಖಲೆಗಳನ್ನು ಮುಂದಿಟ್ಟು ಬಿಜೆಪಿ-ಜೆಡಿಎಸ್ ಮಿತ್ರಕೂಟಕ್ಕೆ ಸಿಎಂ ಪ್ರಶ್ನೆಗಳ ಸೆರೆ ಮಾಲೆಯನ್ನೇ ಹಾಕಿದರು.
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…
ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…
ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…