ರಾಜ್ಯ

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜಪಿ-ಜೆಡಿಎಸ್‌ ಟೀಕೆಗೆ ತಿರುಗೇಟು ನೀಡಿದರು.

ನಗರದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು ಆದರೆ, ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಅಧಿವೇಶನದಲ್ಲಿ ವಿರೋಧ ಪಕ್ಷಗಳ ಹೊಣೆಗೇಡಿತನವನ್ನು ಪತ್ರಿಕಾಗೋಷ್ಠಿಯಲ್ಲಿ ಸಿಎಂ ಎಳೆ ಎಳೆಯಾಗಿ ಬಿಚ್ಚಿಟ್ಟರು.

ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡ್ತಾರೆ. ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಟಾಂಗ್‌ ಕೊಟ್ಟರು.

ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ+ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಹಿಂದಿನ ಬಾರಿಗಿಂತ ಹೆಚ್ಚು ಸೀಟು, ಮತ ಗಳಿಸಲು ಸಾದ್ಯವಾಗಲಿಲ್ಲ. ನಮಗೆ ಕಳೆದ ಲೋಕಸಭಾ ಚುನಾವಣೆಗಿಂತ ಶೇ13 ರಷ್ಟು ಮತಗಳನ್ನು ಈ ಚುನಾವಣೆಯಲ್ಲಿ ಹೆಚ್ಚು ಗಳಿಸಿದೆವು. ಇದರಿಂದ ಹತಾಶರಾಗಿ ಮತ್ತೆ ಜನರ ವಿಶ್ವಾಸ ಗಳಿಸಲು ತಪ್ಪು ದಾರಿಯಲ್ಲಿ ವಾಮ ಮಾರ್ಗ ಹಿಡಿದಿದ್ದಾರೆ ಎಂದು ಕಿಡಿಕಾರಿದರು.

ಯಾವುದೇ ಅಧಿಕೃತ ದಾಖಲೆಗಳಿಲ್ಲದೆ-ಅರೆ ಬರೆ ಪತ್ರಗಳನ್ನು ತೋರಿಸಿ ರಾಜ್ಯದ ಜನರ ಮುಂದೆ ಬಿಜೆಪಿ+ಜೆಡಿಎಸ್ ನಡೆಸಿದ ಜಂಟಿ ಡ್ರಾಮಾಗಳಿಗೆ ಅಧಿಕೃತ ದಾಖಲೆಗಳನ್ನು ಮುಂದಿಟ್ಟು ಸಿಎಂ ಸಿದ್ದರಾಮಯ್ಯ ತಕ್ಕ ಉತ್ತರ ನೀಡಿದರು.

ಮೂಡಾ ಪ್ರಕರಣದ ಪ್ರತೀ ಪತ್ರಗಳು, ಪ್ರತೀ ದಾಖಲೆಗಳನ್ನು ರಾಜ್ಯದ ಜನತೆಯ ಮುಂದೆ ಮಂಡಿಸಿ ಬಿಜೆಪಿ+ಜೆಡಿಎಸ್ ಜಂಟಿ ಸುಳ್ಳುಗಳಿಗೆ ಬಿಜೆಪಿ ಜೆಡಿಎಸ್ ಸದಸ್ಯರ ಸಮ್ಮುಖದಲ್ಲೇ ಆಗಿರುವ ಮೂಡಾ ನಿರ್ಣಯಗಳನ್ನು ಪತ್ರಿಕಾಗೋಷ್ಠಿಯಲ್ಲಿ ಓದುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ಇನ್ನು ಆಗ ಮೂಡದಲ್ಲಿದ್ದ ರಾಮದಾಸ್, ನಾಗೇಂದ್ರ, ಜಿಟಿ ದೇವೇಗೌಡ ಯಾವ ಪಕ್ಷದವರು? ನಾವೇನು ಇಂಥಾ ಜಾಗದಲ್ಲೇ ನಿವೇಶನ ಕೇಳಿಲ್ಲ. ಬಿಜೆಪಿಯವರ ಅವಧಿಯಲ್ಲೇ ಅವರೇ ನಿರ್ಣಯ ಕೈಗೊಂಡು ಕೊಟ್ಟಿರುವ ನಿವೇಶನ ಇದು. ಮತ್ತೇಕೆ ರಾಜ್ಯದ ಜನತೆಯ ಮುಂದೆ ಸುಳ್ಳು ಹೇಳಿ ಸಿಕ್ಕಿಕೊಳ್ಳುತ್ತಿದ್ದೀರಿ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.

ಕುಟುಂಬದಲ್ಲಿ ಅನ್ಯೋನ್ಯರಾಗಿದ್ದವರನ್ನು ಪರಸ್ಪರ ಎತ್ತಿ ಕಟ್ಟಿ ಮನೆ ಮುರುಕ ರಾಜಕಾರಣ ಮಾಡಿದರೆ ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಇದರಲ್ಲಿ ನನ್ನದಾಗಲಿ, ನಮ್ಮ ಪತ್ನಿಯವರದ್ದಾಗಲಿ, ನಮ್ಮ ಬಾಮೈದುನನ ಪಾತ್ರ ಎಲ್ಲಿದೆ ಹೇಳಿ? ಎಂದು ದಾಖಲೆಗಳನ್ನು ಮುಂದಿಟ್ಟು ಬಿಜೆಪಿ-ಜೆಡಿಎಸ್‌ ಮಿತ್ರಕೂಟಕ್ಕೆ ಸಿಎಂ ಪ್ರಶ್ನೆಗಳ ಸೆರೆ ಮಾಲೆಯನ್ನೇ ಹಾಕಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

4 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

4 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

4 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

4 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

4 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago