ರಾಜ್ಯ

ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ?: ಸಿಎಂ ಸಿದ್ದರಾಮಯ್ಯ ಗುಡುಗು!

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಹೊರಡಿಸಿದ್ದಾರೆ. ಇತ್ತ ವಿಪಕ್ಷ ನಾಯಕ ಆರ್‌. ಅಶೋಕ್‌ ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮೌನ ಮುರಿದಿದ್ದು, ವಿಪಕ್ಷ ನಾಯಕ ಅಶೋಕ್‌ ವಿರುದ್ಧ ಗುಡುಗಿದ್ದಾರೆ. ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಬೇಕು. ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? ಎಂದು ಛಾಡಿಸಿದ್ದಾರೆ.

ಈ ಸಂಬಂಧ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ? ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. ಆರ್‌. ಅಶೋಕ್‌ ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು. ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಬಿಎಸ್‌ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಅಶೋಕ್ ಅವರೇ, ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ?

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು.
ಆರ್‌. ಅಶೋಕ್‌ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಬಿಎಸ್‌ವೈ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಡೀಕರಿಸಿದ್ದರಲ್ಲವೇ? ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ.

ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ”. ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

https://x.com/siddaramaiah/status/1825427320393392561?t=wG6qEUc2ZB-igYEaosJIzQ&s=08

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

10 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

10 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

10 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

11 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

13 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

13 hours ago