ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ಆಯೋಜಿಸಲಾಗಿದ್ದು, ಈ ಕಂಬಳಕ್ಕೆ ಸಿಎಂ ಸಿದ್ದರಾಮಯ್ಯ ಅವರು 1 ಕೋಟಿ ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.
ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಕರಾವಳಿಯ ಎಲ್ಲಾ ಸಮುದಾಯದವರು ಒಟ್ಟಾಗಿ ಸೇರುವ ಬೃಯತ್ ವೇದಿಕೆ ಇದಾಗಿದ್ದು, ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ.
ಕಂಬಳ ಸಂಬಂಧ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿದ್ದು, ರಾಜಧಾನಿಯಲ್ಲಿ ಮೊದಲ ಬಾರಿಗೆ ಕಂಬಳ ನಡೆಯುತ್ತಿದ್ದು, ಸುಮಾರು 3 ರಿಂದ 5 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಅರಮನೆ ಮೈದಾನದಲ್ಲಿ ಸುಮಾರು 70 ಎಕರೆ ಜಾಗದಲ್ಲಿ ಕಂಬಳ ನಡೆಯಲಿದೆ ಎಂದರು.
ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ಮಾತನಾಡಿ, ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲಾ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ, ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ ಎಂದರು.
ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಅವರು ಮಾತನಾಡಿ, ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಥೀಮ್ ಸಾಂಗ್ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…