ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕರ ವಿಧಾನಸಭಾಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನವನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿ ಶಾಸಕರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯ ಮೂಲಗಳು ತಿಳಿಸಿವೆ.
ಶಾಸಕರಿಗೆ ಮುಖ್ಯಮಂತ್ರಿ ಅವರು ಬರೆದಿರುವ ಅನುದಾನ ಮಂಜೂರು ಮಾಡುವ ಕುರಿತ ಪತ್ರವನ್ನು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯವರ ಕಚೇರಿಯಲ್ಲಿ ಪಡೆದುಕೊಳ್ಳಲು ಸೂಚಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕರ ಆಪ್ತಸಹಾಯಕರು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯ ಕಚೇರಿಯನ್ನು ಸಂಪರ್ಕಿಸಿ ಪತ್ರ ಪಡೆದುಕೊಳ್ಳುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಂ ಪ್ರಭು ಪಾಟೀಲ್ ಅವರು ನಿರ್ದೇಶಿಸಿದ್ದಾರೆ ಎಂದು ಕಾಂಗ್ರೆಸ್‍ನ ಮೂಲಗಳು ಹೇಳಿವೆ. ಈ ಮೂಲಕ ಅಸಮಾಧಾನಿತ ಶಾಸಕರ ಮನವೊಲಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.





