ರಾಜ್ಯ

ಕಾಂಗ್ರೆಸ್‌ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬಂಪರ್‌ ಗಿಫ್ಟ್:‌ ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕರ ವಿಧಾನಸಭಾಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನವನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿ ಶಾಸಕರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯ ಮೂಲಗಳು ತಿಳಿಸಿವೆ.

ಶಾಸಕರಿಗೆ ಮುಖ್ಯಮಂತ್ರಿ ಅವರು ಬರೆದಿರುವ ಅನುದಾನ ಮಂಜೂರು ಮಾಡುವ ಕುರಿತ ಪತ್ರವನ್ನು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯವರ ಕಚೇರಿಯಲ್ಲಿ ಪಡೆದುಕೊಳ್ಳಲು ಸೂಚಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಶಾಸಕರ ಆಪ್ತಸಹಾಯಕರು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯ ಕಚೇರಿಯನ್ನು ಸಂಪರ್ಕಿಸಿ ಪತ್ರ ಪಡೆದುಕೊಳ್ಳುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಂ ಪ್ರಭು ಪಾಟೀಲ್ ಅವರು ನಿರ್ದೇಶಿಸಿದ್ದಾರೆ ಎಂದು ಕಾಂಗ್ರೆಸ್‍ನ ಮೂಲಗಳು ಹೇಳಿವೆ. ಈ ಮೂಲಕ ಅಸಮಾಧಾನಿತ ಶಾಸಕರ ಮನವೊಲಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

15 mins ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

2 hours ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

2 hours ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

2 hours ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

3 hours ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

3 hours ago