ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಕನ್ನಡಿಗರಿಗೆ ತಲಾ 10 ಲಕ್ಷ ರೂಪಾಯಿ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ರಾಜ್ಯ ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದರು.
ನಿನ್ನೆ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಕ್ಕೆ ತೆರಳಿದ್ದ ವೇಳೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿಗೆ ಸಿಲುಕಿ ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರು ನಿವಾಸಿ ಭರತ್ ಭೂಷಣ್ ಮೃತಪಟ್ಟಿದ್ದಾರೆ.
ಇವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.





