ಬೆಂಗಳೂರು: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್‌ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂಧಿಸಿ ಸನ್ಮಾನ ಮಾಡಿ ತಲಾ ಐದು ಲಕ್ಷ ರೂ ಪ್ರೋತ್ಸಾಹ ಧನ ಘೋಷಿಸಿದರು.
ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋಂವಿಂದರಾಜು ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಇಬ್ಬರೂ ಪಟುಗಳಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು.
ಇದನ್ನು ಓದಿ: ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ: ಬೆಳೆ ಹಾನಿಗೆ ಪರಿಹಾರ ಘೋಷಣೆ
ಇಬ್ಬರೂ ಪಟುಗಳಿಗೆ ತಲಾ ಐದು ಲಕ್ಷದ ಚೆಕ್ ವಿತರಿಸುವಂತೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರರಾದ ಬಿ.ಎನ್.ಸುಧಾಕರ್ ಉಪಸ್ಥಿತರಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…