Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ತನಿಖೆಗೆ ದಾರಿ: ಮೇಲ್ಮನವಿ ತಯಾರಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಇದರ ಬೆನ್ನಲೇ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರ ಮುಂದಿದ್ದ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಇದ್ದ ತಡೆ ಆದೇಶ ತೆರವುಗೊಂಡಂತಾಗಿದೆ.

ಇಂದು ಈ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗೆ ಬರಲಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ವಿಭಾಗೀಯ ಪೀಠದ ಮುಂದೆ ಇಂದು ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಲು ಹೋಗಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ.

ಹೈಕೋರ್ಟ್‌ ತೀರ್ಪು ಪ್ರಕಟಿಸುತ್ತಿದ್ದಂತೆ ಸಚಿವರು ಹಾಗೂ ಶಾಸಕರ ದಂಡು ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದು, ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ ಎಂದು ಹೇಳಿದ್ದಾರೆ.

ಹೈಕೋರ್ಟ್‌ ತೀರ್ಪು ಹಾಗೂ ಮುಂದಿನ ಹೆಜ್ಜೆಯ ಕುರಿತು ಸಚಿವರು ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು, ಇಂದು ನಡೆಯುವ ಎಲ್ಲಾ ಬೆಳವಣಿಗೆ ಬಗ್ಗೆ ಭಾರೀ ಕುತೂಹಲ ಮನೆಮಾಡಿದೆ.

 

Tags: