ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇದರ ಬೆನ್ನಲೇ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದಿದ್ದ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಇದ್ದ ತಡೆ ಆದೇಶ ತೆರವುಗೊಂಡಂತಾಗಿದೆ.
ಇಂದು ಈ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗೆ ಬರಲಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ವಿಭಾಗೀಯ ಪೀಠದ ಮುಂದೆ ಇಂದು ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಲು ಹೋಗಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ.
ಹೈಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆ ಸಚಿವರು ಹಾಗೂ ಶಾಸಕರ ದಂಡು ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದು, ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ ಎಂದು ಹೇಳಿದ್ದಾರೆ.
ಹೈಕೋರ್ಟ್ ತೀರ್ಪು ಹಾಗೂ ಮುಂದಿನ ಹೆಜ್ಜೆಯ ಕುರಿತು ಸಚಿವರು ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು, ಇಂದು ನಡೆಯುವ ಎಲ್ಲಾ ಬೆಳವಣಿಗೆ ಬಗ್ಗೆ ಭಾರೀ ಕುತೂಹಲ ಮನೆಮಾಡಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…