booker
ಬೆಂಗಳೂರು: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಆಯೋಜಿಸಿದ್ದ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು.
ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬೂಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ ಎಂದು ಮೆಚ್ಚುಗೆ ಸೂಚಿಸಿದರು.
ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್, ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.
ಬಾನು ಅವರ ಕತೆಗಳನ್ನು ಇಂಗ್ಲಿಷ್‌ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.
ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ. ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.
ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಧ್ವನಿಯಾಗಿ, ಮೌಢ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿನ್ನು ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.
ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಅವರು ಕೆಲಸ ಮಾಡಿದ್ದಾರೆ ಎಂದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…